ಬಾಗಲಕೋಟೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಸಿ.ಸಿ. ಪಾಟೀಲ್

ಹೊಸದಿಗಂತ ವರದಿ, ಬಾಗಲಕೋಟೆ:

ಜಿಲ್ಲಾಡಳಿಯದಿಂದ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನೂತನ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ 73 ನೇ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಪೊಲೀಸ್ ,ಗೃಹರಕ್ಷಕದಳ, ಅರಣ್ಯ ಇಲಾಖೆ, ಅಗ್ನಿಶಾಮಕದಳದಿಂದ ಗೌರವ ವಂದನೆ ಸ್ವೀಕಾರ ಹಾಗೂ ಪರೇಡ್ ವೀಕ್ಷಣೆ ನಂತರ ಗಣರಾಜ್ಯೋತ್ಸವದ‌ ಭಾಷಣ ಮಾಡಿದರು.
ವೈವಿದ್ಯತೆಯಲ್ಲಿ ಏಕತೆಯನ್ನು ಸಾಧಿಸಿದ ದೇಶ ನಮ್ಮದಾಗಿದೆ. ಅಸಂಖ್ಯಾತ ದೇಶಾಭಿಮಾನಿಗಳ ಹೋರಾಟ, ತ್ಯಾಗ, ಬಲಿದಾನದ
ಫಲವಾಗಿ ನಮ್ಮ ಭಾರತ ದೇಶ 1947 ಆಗಸ್ಟ್ 15ರಂದು ಬ್ರಿಟಿಷರ ಸಂಕೋಲೆಯಿಂದ ಮುಕ್ತಿ ಹೊಂದಿ ಸ್ವತಂತ್ರ ರಾಷ್ಟ್ರವಾಯಿತು ಎಂದರು.
ತಂತ್ರಜ್ಞಾನ, ರಕ್ಷಣಾಕ್ಷೇತ್ರ ,ಶಿಕ್ಷಣ, ಆಧ್ಯಾತ್ಮ, ಯೋಗ ಹಾಗೂ ಕೋವಿಡ್ ಲಸಿಕೆ ನೀಡುವುದರಲ್ಲಿ ಜಗತ್ತಿಗೆ ಮಾದರಿಯಾಗುವಂತೆ ಜಗತ್ತಿನಲ್ಲಿ ಸಾಧನೆಗೈದಿದೆ.ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆ ಆಧಾರದ ಮೇಲೆ ಅತ್ಯಂತ ಬಲಿಷ್ಠ ರಾಷ್ಟ್ರ ವನ್ನಾಗಿ ,ಸ್ವಾವಲಂಬಿ ದೇಶವನ್ನಾಗಿ ನಮ್ಮ‌ನೆಚ್ಚಿನ ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃದ್ಧಿ ಪಥದಲ್ಲಿ ಒಯ್ಯುತ್ತಿರುವುದನ್ನು ಇಡೀ ಜಗತ್ತೆ ಪ್ರಶಂಸಿಸುತ್ತಿದೆ ಎಂದು ಹೇಳಿದರು.
ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ , ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ, ಎಸ್ಪಿ ಲೊಕೇಶ ಜಗಲಾಸಾರ್, ಸಿಇಓ ಟಿ.ಭೂಬಾಲನ್, ಬುಡಾ ಅಧ್ಯಕ್ಷ ಬಸಲಿಂಗಪ್ಪ‌ನಾವಲಗಿ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!