ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಂಗತ ವರದಿ, ಗದಗ:
ಕೇಂದ್ರ ಸರ್ಕಾರ ಬಾಲಸ್ವರಾಜ ಯೋಜನೆ ಜಾರಿಗೊಳಿಸಿದ್ದು ಮಕ್ಕಳು ತಂದೆ- ತಾಯಿ, ಕಳೆದುಕೊಂಡು ಅನಾಥರಾದಲ್ಲಿ ಅವರಿಗೆ ಸಹಾಯಧನ ನೀಡುವ ಯೋಜನೆ ಇದಾಗಿದೆ. ಅದರಂತೆ ಜಿಲ್ಲೆಯಲ್ಲಿ 56 ಮಕ್ಕಳು ತಂದೆ ಅಥವಾ ತಾಯಿಯನ್ನು (ಸಿಂಗಲ್ ಪೆರೆಂಟ್) ಕಳೆದುಕೊಂಡಿದ್ದಾರೆ. ರೋಣ ಹಾಗೂ ನರಗುಂದ ತಾಲೂಕಿನಲ್ಲಿ ತಂದೆ ಹಾಗೂ ತಾಯಿಯನ್ನು ಕಳೆದುಕೊಂಡ ಇಬ್ಬರ ಮಕ್ಕಳ ಯೋಗಕ್ಷೇಮ, ಶಿಕ್ಷಣ ಹಾಗೂ ಆರೋಗ್ಯದ ಸಂಪೂರ್ಣ ವೆಚ್ಚವನ್ನು ವೈಯಕ್ತಿಕವಾಗಿ ಮಾಡಲಾಗುವದು ಹಾಗೂ ಅವರ ಪಾಲಕರ ಆಸ್ತಿಯನ್ನು ಮಕ್ಕಳ ಹೆಸರಿಗೆ ನೋಂದಾಯಿಸಲು ಅಗತ್ಯದ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಿ.ಸಿ.ಪಾಟೀಲ್ ಅವರು ಹೇಳಿದರು.