ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………
ಹೊಸದಿಗಂತ ಆನ್ಲೈನ್ ಡೆಸ್ಕ್:
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಸಿ.ಜಯರಾಮ್ ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ ಬೆಂಗಳೂರಿನ ಸುಮ್ಮನಹಳ್ಳಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
ಜಯರಾಮ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.
ಸ್ಯಾಂಡಲ್ವುಡ್ ಖ್ಯಾತ ನಿರ್ಮಾಪಕ ಜಯರಾಮ್ ಅವರು ಅನೇಕ ಹಿಟ್ ಸಿನಿಮಾಗಳಿಗೆ ಬಂಡವಾಳ ಹೂಡಿದ್ದರು. ಶಂಕರ್ನಾಗ್ ನಟನೆಯ ಆಟೋರಾಜ, ಅನಂತ್ನಾಗ್ ಅಭಿನಯದ ನಾ ನಿನ್ನ ಬಿಡಲಾರೆ, ವಿಷ್ಣುವರ್ಧನ್, ರಜನಿಕಾಂತ್ ಅಭಿನಯದ ಗಲಾಟೆ ಸಂಸಾರ, ಶ್ರೀನಾಥ್ ಅಭಿನಯದ ಪಾವನಗಂಗ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಜಯರಾಮ್ ಅವರ ಪುತ್ರ ಪ್ರಕಾಶ್ ಕೂಡ ಸ್ಯಾಂಡಲ್ವುಡ್ನ ಖ್ಯಾತ ನಿರ್ಮಾಪಕರಾಗಿದ್ದಾರೆ. ಮಿಲನ, ತಾರಕ್ ಮುಂದಾದ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.