ಬ್ರಿಟೀಷರ ವಿರುದ್ಧ ಕ್ರಾಂತಿ ಕಹಳೆ ಮೊಳಗಿಸಿದ್ದ ಈ ಧೀರ ಬಹುಪಾಲು ಜೀವನ ಜೈಲಲ್ಲೇ ಕಳೆದ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಸಿ.ಕೆ. ಗೋವಿಂದನ್ ನಾಯರ್ ಅವರು 1896 ರಲ್ಲಿ ಕೇರಳದ ಕಣ್ಣೂರು ಜಿಲ್ಲೆಯ ತಲಶ್ಶೇರಿಯಲ್ಲಿ ಜನಿಸಿದರು. ಅವರು 1917 ರಲ್ಲಿ ಪಾಲಕ್ಕಾಡ್ನಲ್ಲಿ ಸ್ವಾತಂತ್ರ್ಯ ಚಳವಳಿಯನ್ನು ಬೆಂಬಲಿಸುವ ವಿದ್ಯಾರ್ಥಿ ಆಂದೋಲನದಲ್ಲಿ ಭಾಗವಹಿಸುವ ಮೂಲಕ ತಮ್ಮ ಸ್ವಾತಂತ್ರ್ಯ ಹೋರಾಟವನ್ನು ಪ್ರಾರಂಭಿಸಿದರು. ಈ ಕಾರಣದಿಂದ ಅವರನ್ನು ಕಾನೂನು ಕಾಲೇಜಿನಿಂದ ಹೊರ ಹಾಕಲಾಯಿತು. ಆ ಬಳಿಕ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಪೂರ್ಣಕಾಲಿಕ ನಾಯಕರಾದರು. ಕೆಲ ವರ್ಷಗಳ ಬಳಿಕ ಅವರು ಗಾಂಧೀಜಿಯವರನ್ನು ಭೇಟಿ ಮಾಡಿದರು, ಅದು ಅವರ ಜೀವನವನ್ನು ಬದಲಾಯಿಸಿತು.
ಗಾಂಧೀಜಿಯವರ ಹಾದಿಯನ್ನು ಅನುಸರಿಸಿದ ನಾಯರ್ ವಿದೇಶಿ ಬಟ್ಟೆಗಳನ್ನು ಬಹಿಷ್ಕರಿಸಿದರು ಮತ್ತು ಸ್ವಾತಂತ್ರ್ಯ ಹೋರಾಟದ ಸಭೆಗಳು ಮತ್ತು ಮೆರವಣಿಗೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಅವರು 1932 ರಲ್ಲಿ ನಾಗರಿಕ ಅಸಹಕಾರ ಚಳವಳಿಯಲ್ಲಿ ಭಾಗವಹಿಸಿದರು ಮತ್ತು ಇದಕ್ಕಾಗಿ ಆರು ತಿಂಗಳ ಕಾಲ ಕಣ್ಣೂರು ಮತ್ತು ಕ್ಯಾಲಿಕಟ್ ಜೈಲುಗಳಲ್ಲಿ ಸೆರೆವಾಸ ಅನುಭವಿಸಿದರು. ನಂತರ 1933 ರಲ್ಲಿ ಮಲಬಾರ್‌ನಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಸಭೆಯಲ್ಲಿ ಅವರನ್ನು ಮತ್ತೆ ಬಂಧಿಸಲಾಯಿತು.
ಅವರು ಮಲಬಾರ್ ನಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಾಗ ಪರಿಹಾರ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು. 1942 ರಲ್ಲಿ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದಕ್ಕೆ ಬ್ರಿಟೀಷ್‌ ಸರ್ಕಾರವು ಮತ್ತೆ ಅವರನ್ನು ಬಂಧಿಸಿ ಮಿಳುನಾಡಿನ ವೆಲ್ಲೂರು ಜೈಲಿನಲ್ಲಿ ಮೂರು ವರ್ಷಗಳ ಕಾಲ ಜೈಲಿನಲ್ಲಿರಿಸಿತ್ತು. ನಂತರ 1946ರಲ್ಲಿ ಮದ್ರಾಸ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಅವರು ಮಲಬಾರ್‌ ಪ್ರಾಂತ್ಯದಿಂದ ಆಯ್ಕೆಯಾದರು. ಅವರು 1964 ರಲ್ಲಿ ರಾಜ್ಯಸಭೆಗೆ ಆಯ್ಕೆಯಾದರು. 1964 ರ ಜೂನ್ 27ರಂದು ನಿಧನರಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!