ಕಾಂಗ್ರೆಸ್‌ ಗೆ ಗುಡ್‌ ಬೈ ಹೇಳಿದ ಸಿ.ಎಂ.ಇಬ್ರಾಹಿಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್‌ ಮುಸ್ಲೀಮರನ್ನು ಗೌರವದಿಂದ ನಡೆಸಿಕೊಳ್ಳುತ್ತಿಲ್ಲ, ನಮಗೆ ಯಾವುದೇ ಅಧಿಕಾರ ಕೊಡುತ್ತಿಲ್ಲ ಎಂದು ಆರೋಪಿಸಿ ತಮ್ಮ ಎಂಎಲ್‌ʼಸಿ ಸ್ಥಾನ ಹಾಗೂ ಕಾಂಗ್ರೆಸ್‌ ಸದಸ್ಯತ್ವಕ್ಕೆ ಸಿ.ಎಂ. ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸ್ವಾಭಿಮಾನದಿಂದ ಕಾಂಗ್ರೆಸ್‌ ತೊರೆಯುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೆ ಕಳಿಸುತ್ತೇನೆ. ಇದನ್ನು ಅಂಗೀಕರಿಸಬಹುದು. ನಾನು ನನ್ನ ಜವಾಬ್ದಾರಿಯಿಂದ ಮುಕ್ತನಾಗಿದ್ದೇನೆ ಎಂದು ತಿಳಿಸಿದರು.
ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಸಿದ್ದರಾಮಯ್ಯ ಅವರಿಗೆ ಧನ್ಯವಾದಗಳು. ಆದರೆ ಅವರೇ ಕೆಲವರನ್ನು ಪಕ್ಷದಿಂದ ಹೊರ ಹಾಕುತ್ತಿದ್ದಾರೆ. ಅದಕ್ಕೆ ನಾನು ನನ್ನನ್ನು ಹೊರ ಹಾಕುವ ಮೊದಲೇ ಪಕ್ಷ ತೊರೆಯುತ್ತಿದ್ದೇನೆ.
ನನ್ನ ಮುಂದಿನ ನಿರ್ಣಯಗಳನ್ನು ಜೆಡಿಎಸ್‌ ವರಿಷ್ಠರಾದ ದೇವೇಗೌಡ, ಕುಮಾರ್‌ ಸ್ವಾಮಿ ಹಾಗೂ ರೇವಣ್ಣ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದರು.
1995ರಂತೆ ಈಗಲೂ ಕಂಡುಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ನೆಲೆ ಕಳೆದುಕೊಳ್ಳುತ್ತಿದೆ. ಜನರ ಜೊತೆ ಸಂಪರ್ಕ ಇಲ್ಲದಿರುವವರನ್ನೇ ನಾಯಕರನ್ನಾಗಿ ಬೆಳೆಸುತ್ತಿದೆ. ಅದರ ಪರಿಣಾಮ ಏನು ಎಂಬುದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ತಿಳಿಯುತ್ತದೆ.
ಕಾಂಗ್ರೆಸ್‌ ಮುಸ್ಲೀಮರನ್ನು ಗೌರವದಿಂದ ನಡೆಸಿಕೊಳ್ಲೂವುದಿಲ್ಲ. ನಮ್ಮನ್ನು ಪಕ್ಷದಲ್ಲಿ ಬಳಸಿಕೊಳ್ಳುತ್ತಿದ್ದಾರೆ. ಯಾವುದೇ ಅಧಿಕಾರ ಕೊಡುತ್ತಿಲ್ಲ ಎನ್ನುವ ಕಾರಣಕ್ಕೆ ನಾನು ಕಾಂಗ್ರೆಸ್‌ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!