ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಅವರಿಂದು ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್, ನಿರ್ಗಮಿತ ರಾಜ್ಯಪಾಲರಾದ ಜಗದೀಪ್ ಧನ್ಕರ್ ಸೇರಿದಂತೆ ನೂರಾರು ಗಣ್ಯರ ಸಮ್ಮುಖದಲ್ಲಿ ಇಂದು ಬೆಳಗ್ಗೆ 10ಗಂಟೆ ಸುಮಾರು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ, ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಪಂಜಾಬ್ ರಾಜ್ಯಪಾಲ ಮತ್ತು ಚಂಡೀಗಢ ಆಡಳಿತಾಧಿಕಾರಿ ಗುಲಾಬ್ ಚಂದ್ ಕಟಾರಿಯಾ, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಗಂಗ್ವಾರ್ ಮತ್ತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.