ಸಿ.ಟಿ. ರವಿ ಬಂಧನಕ್ಕೆ ಖಂಡನೆ: ಇಂದು ಚಿಕ್ಕಮಗಳೂರು ನಗರ ಬಂದ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ನಿಂದಿಸಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅವರನ್ನ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಈ ಘಟನೆ ರಾಜ್ಯ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಸಿ.ಟಿ ರವಿ ಬಂಧನ  ಖಂಡಿಸಿ ಡಿ. 20ರಂದು ಚಿಕ್ಕಮಗಳೂರು ನಗರ ಬಂದ್‌ಗೆ  ನಗರ ಬಿಜೆಪಿ ಕರೆ ಕೊಟ್ಟಿದೆ.

ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನೂರಾರು ಪೊಲೀಸರು ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಗಸ್ತು ತಿರುಗುತ್ತಿದ್ದಾರೆ. ನಗರದ ಹನುಮಂತಪ್ಪ ಸರ್ಕಲ್‌ನಲ್ಲಿ 6 ಕೆಎಸ್‌ಆರ್‌ಪಿ ತುಕಡಿಗಳು ಸೇರಿದಂತೆ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!