ಸಿಎಎ ಜಾರಿ ಚುನಾವಣಾ ಗಿಮಿಕ್: ಸಿಎಂ ಸಿದ್ದರಾಮಯ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇವಲ ಚುನಾವಣೆಯ ದೃಷ್ಡಿಯಿಂದ ಪೌರತ್ವ ಕಾಯ್ದೆಯನ್ನುಕೇಂದ್ರ ಸರಕಾರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಉಡುಪಿಯ ಮಾತನಾಡಿದ ಅವರು, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ, ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ. ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಇನ್ನು ಜಯಪ್ರಕಾಶ್ ಹೆಗ್ಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!