ದೇಶದಲ್ಲಿ ಶೀಘ್ರವೇ ಸಿಎಎ ಜಾರಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ದೇಶದಲ್ಲಿ ಕೊರೋನಾ ಕಡಿಮೆಯಾದ ಕೂಡಲೇ ನಾವು ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಸಿಲಿಗುರಿ ನಗರದಲ್ಲಿ ಗುರುವಾರ ಮಾತನಾಡಿದ ಅವರು, ಮಮತಾ ದೀದಿಯವರು ಒಳನುಸುಳುವಿಕೆಯನ್ನು ಬಯಸುತ್ತಾರೆ ಅಂತ ಕಿಡಿಕಾರಿದರು.
ಸಿಎಎ ಬಗ್ಗೆ ಟಿಎಂಸಿ ವದಂತಿಗಳನ್ನು ಹರಡುತ್ತಿದೆ, ಆದರೆ ಅದು ನಿಜವಲ್ಲ, ಕೋವಿಡ್ ಅಲೆ ಕೊನೆಗೊಂಡ ಕ್ಷಣದಲ್ಲಿ ನಾವು ಸಿಎಎ ಅನ್ನು ಜಾರಿ ಮಾಡುತ್ತೇವೆ ಅಂತ ಹೇಳಿದರು. ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳವನ್ನು ಎದುರಿಸಿದ ಹಿಂದು, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳ ಸದಸ್ಯರಿಗೆ ಪೌರತ್ವವನ್ನು ನೀಡುವ ಗುರಿಯನ್ನು ಹೊಂದಿದೆ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!