ನಾನು ಬದುಕಿರುವವರೆಗೂ ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡುವುದಿಲ್ಲ: ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ನಾನು ಬದುಕಿರುವವರೆಗೂ ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡುವುದಿಲ್ಲ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಮಂಗಳವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಅವರು, ನನ್ನ ಜೀವಿತಾವಧಿಯಲ್ಲಿ ಪಶ್ಚಿಮ ಬಂಗಾಳದಲ್ಲಿ ಅದನ್ನು ಜಾರಿಗೆ ತರಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ಉತ್ತರ ದಿನಾಜ್ಪುರ ಜಿಲ್ಲೆಯ ರಾಯಗಂಜ್ನಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾನರ್ಜಿ, ‘ಮುಂಬರುವ ಚುನಾವಣೆಗೆ ಮುನ್ನ ಬಿಜೆಪಿಯು ಪೌರತ್ವ (ತಿದ್ದುಪಡಿ) ಕಾಯ್ದೆ ಅಥವಾ ಸಿಎಎ ವಿಷಯವನ್ನು ಅವಕಾಶವಾದಿಯಾಗಿ ಎತ್ತಿದ”. ಚುನಾವಣೆ ಸಂದರ್ಭಗಳಲ್ಲೇ ಬಿಜೆಪಿಗೆ ಇಂತಹವೆಲ್ಲಾ ಹೊಳೆಯುತ್ತದೆ. ಚುನಾವಣೆಗಳು ಸಮೀಪಿಸುತ್ತಿರುವಾಗ, ರಾಜಕೀಯ ಲಾಭ ಪಡೆಯಲು ಬಿಜೆಪಿ ಮತ್ತೆ ಸಿಎಎ ವಿಷಯವನ್ನು ಕೆದಕಿದೆ.ಆದರೆ ನಾನು ಬದುಕಿರುವವರೆಗೂ ಪಶ್ಚಿಮ ಬಂಗಾಳದಲ್ಲಿ ಅದರ ಅನುಷ್ಠಾನ ಮಾಡಲು ಬಿಡುವುದಿಲ್ಲ ಎಂದು ನಾನು ಸ್ಪಷ್ಟವಾಗಿ ಹೇಳುತ್ತೇನೆ ಎಂದು ಹೇಳಿದರು.

ಒಂದು ವಾರದೊಳಗೆ ಸಿಎಎ ದೇಶಾದ್ಯಂತ ಜಾರಿಯಾಗಲಿದೆ ಎಂದು ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಶಾಂತನು ಠಾಕೂರ್ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಇದರ ವಿರುದ್ಧ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!