ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಪೌರತ್ವ ತಿದ್ದುಪಡಿ ಕಾಯ್ದೆಯಡಿ ಭಾರತದಲ್ಲಿ ವಾಸಿಸುವ ಯಾರ ಪೌರತ್ವವನ್ನೂ ವಾಪಸ್ ಪಡೆಯುವುದಿಲ್ಲ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ
ಅಸ್ಸಾಂನ ಬರ್ಪೇಟಾದಲ್ಲಿ ಬಿಜೆಪಿ ಅಭ್ಯರ್ಥಿ ಪನಿ ಭೂಷಣ್ ಚೌಧರಿ ಪರವಾಗಿ ಪ್ರಚಾರದಲ್ಲಿ ಭಾಗಿಯಾದ ಅವರು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜನರು ತಪ್ಪಾಗಿ ಗ್ರಹಿಸಿದ್ದಾರೆ. ಕಾಯ್ದೆ ಯಾರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ, ಬದಲಾಗಿ ಪೌರತ್ವವನ್ನು ನೀಡುತ್ತದೆ. ಇದಕ್ಕೆ ನಾನು ಭರವಸೆ ನೀಡುತ್ತೇನೆ’ ಎಂದರು.
ಇದೇ ವೇಳೆ ಅಯೋಧ್ಯೆ ರಾಮ ಮಂದಿರ ನಿರ್ಮಾಣದ ಬಗ್ಗೆ ಉಲ್ಲೇಖಿಸಿ, ‘ಭಾರತ ರಾಮರಾಜ್ಯವಾಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ’ ಎಂದರು.