September 9, 2026
Wednesday, September 9, 2026
spot_img

ವಿದ್ಯಾರ್ಥಿ ಚುನಾವಣೆಗೆ ಸಚಿವ ಸಂಪುಟ ಒಪ್ಪಿಗೆ; ರಾಜಕೀಯ ಪಕ್ಷಗಳ ಬ್ಯಾನರ್, ಹಸ್ತಕ್ಷೇಪಕ್ಕೆ ಸಂಪೂರ್ಣ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಯೊಂದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರುಪ್ರಾರಂಭಿಸಲು ರಾಜ್ಯ ಸಚಿವ ಸಂಪುಟ ಬುಧವಾರ ಅಧಿಕೃತ ಅನುಮೋದನೆ ನೀಡಿದೆ.

ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ವಾತಾವರಣ ಕೆಡದಂತೆ ತಡೆಯಲು ಮತ್ತು ರಾಜಕೀಯ ಹಸ್ತಕ್ಷೇಪವನ್ನು ತಡೆಗಟ್ಟಲು ಈ ಬಾರಿ ಅತ್ಯಂತ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುತ್ತಿದೆ.

ರಾಜಕೀಯ ಪಕ್ಷಗಳ ಬ್ಯಾನರ್‌ಗಳಿಗೆ ನಿಷೇಧ

ಹೊಸ ನಿಯಮಾವಳಿಗಳ ಪ್ರಕಾರ, ಕಾಲೇಜು ಚುನಾವಣೆಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳ ಬ್ಯಾನರ್, ಚಿಹ್ನೆ ಅಥವಾ ಪ್ರಚಾರ ಸಾಮಗ್ರಿಗಳನ್ನು ಬಳಸಲು ಅವಕಾಶವಿರುವುದಿಲ್ಲ. ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷದ ನೆರವಿಲ್ಲದೆ ಸ್ವತಂತ್ರವಾಗಿ ಸ್ಪರ್ಧಿಸಬೇಕಾಗುತ್ತದೆ.

ಮೀಸಲಾತಿ ಇಲ್ಲ, ಕಡ್ಡಾಯವೂ ಅಲ್ಲ

ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಯಾವುದೇ ರೀತಿಯ ಜಾತಿಗೆ ಸಂಬಂಧಿಸಿದ ಮೀಸಲಾತಿ ಇರುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಹಾಗೆಯೇ ಈ ಚುನಾವಣೆಗಳು ಎಲ್ಲ ಕಾಲೇಜುಗಳಿಗೂ ಕಡ್ಡಾಯವಲ್ಲ. ಒಂದು ವೇಳೆ ಯಾವುದೇ ಕಾಲೇಜಿನ ವಿದ್ಯಾರ್ಥಿಗಳಿಗೆ ತಮ್ಮ ಸಂಸ್ಥೆಯಲ್ಲಿ ಚುನಾವಣೆ ಬೇಡವೆನಿಸಿದರೆ, ಅಲ್ಲಿ ಎಲೆಕ್ಷನ್ ನಡೆಸಲಾಗುವುದಿಲ್ಲ ಎಂದು ಕೂಡ ತಿಳಿಸಿದ್ದಾರೆ.

ಇದನ್ನೂ ಓದಿ:

ಕಳೆದ ವರ್ಷವೇ ಡಿ.ಕೆ. ಶಿವಕುಮಾರ್ ಅವರು ಕ್ಯಾಂಪಸ್‌ಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಲು ವಿದ್ಯಾರ್ಥಿ ಚುನಾವಣೆಗಳನ್ನು ತರಲಾಗುವುದು ಎಂದು ಘೋಷಿಸಿದ್ದರು. ಅದರಂತೆ ಈಗ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿರುವುದರಿಂದ, ಶೀಘ್ರದಲ್ಲೇ ಉನ್ನತ ಶಿಕ್ಷಣ ಇಲಾಖೆಯು ಅಧಿಕೃತ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !