ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಚಿವ ಸಂಪುಟ ಸಭೆಯಲ್ಲಿ ಇಂದು ಸಾರಿಗೆ ನೌಕರರ (Transport Employees) ವೇತನವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಶೇ. 25 ರಷ್ಟು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿರುವ ನೌಕರರು, ಬಿಜೆಪಿ ಸರ್ಕಾರ ಶೇ 14, ಶೇ 17ರಷ್ಟು ವೇತನ ಹೆಚ್ಚಳಕ್ಕೆ ಮುಂದಾಗಿದ್ದಾಗಲೇ ನಿರಾಕರಿಸಿ ಶೇ. 25 ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದರು. ಇದೀಗ ರಾಜ್ಯ ಸರಕಾರ 15ರಷ್ಟು ಹೆಚ್ಚಳ ಮಾಡಲು ಚಿಂತಿಸಿದ್ದು, ಇದಕ್ಕೆ ಸಾರಿಗೆ ನೌಕರರು ಒಪ್ಪುವರೇ? ಎಂದು ಕಾದುನೋಡಬೇಕಿದೆ .
ಇನ್ಸೆಟಿವ್ ಹೆಚ್ಚು ಮಾಡುವುದು, ಬಾಟಾವನ್ನ ಹೆಚ್ಚು ಮಾಡುವುದು, ಶೇ. 25 ರಷ್ಟು ವೇತನ ಹೆಚ್ಚಳ ಮಾಡುವುದು, ಜೊತೆಗೆ ವಜಾ ಮಾಡಿದ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವುದು ಸಾರಿಗೆ ನೌಕರರು ಸರ್ಕಾರದ ಮುಂದಿಟ್ಟಿರುವ ಪ್ರಮುಖ ಬೇಡಿಕೆಗಳಾಗಿವೆ. ಈ ಪೈಕಿ ವೇತನ ಹೆಚ್ಚಳಕ್ಕೆ ಮುಂದಾಗಿರುವ ಕಾಂಗ್ರೆಸ್, ಸಚಿವ ಸಂಪುಟ ಸಭೆಯಲ್ಲಿ ಶೇ 15ರಷ್ಟು ವೇತನ ಹೆಚ್ಚಳಕ್ಕೆ ಅನುಮೋದನೆ ಪಡೆದುಕೊಂಡಿದೆ.