ಹಾಲಿನ ದರ ಏರಿಕೆ ಭವಿಷ್ಯ ಕ್ಯಾಬಿನೆಟ್‌ನಲ್ಲಿ ನಿರ್ಧಾರ, ಲೀಟರ್‌ಗೆ 2-3ರೂ. ಹೆಚ್ಚಳ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಹಾಲಿನ ದರ ಏರಿಕೆಗೆ ಪ್ರಸ್ತಾಪಿಸಿದ್ದು, ಇಂದು ಕ್ಯಾಬಿನೆಟ್‌ನಲ್ಲಿ ನಿರ್ಧಾರವಾಗಲಿದೆ.

ಈ ಹಿಂದೆ ನಡೆದ ಸಭೆಯಲ್ಲಿ ಸಿಎಂ ಪ್ರಸ್ತಾಪಿಸಿದ ದರಕ್ಕೆ ಒಪ್ಪಿಗೆ ಸೂಚಿಸಿರಲಿಲ್ಲ. ಹಾಲಿನ ದರ ಹೆಚ್ಚಳ ಹಣ ಕೇವಲ ರೈತರಿಗಷ್ಟೇ ಇರಲಿ ಎಂದಿದ್ದರು. ಆದರೆ ಸಭೆಯ ಬಳಿಕ 5 ರೂ.ಯಾದರೂ ಹೆಚ್ಚಳ ಮಾಡಿ, ಅದರಲ್ಲಿ 3 ರೂ. ರೈತರಿಗೆ, 2 ರೂ. ಒಕ್ಕೂಟಗಳಿಗೆ ಇರಲಿ ಎಂದು ಪ್ರಸ್ತಾಪಿಸಿದ್ದರು.

ಒಕ್ಕೂಟಗಳ ಪ್ರಸ್ತಾಪವನ್ನು ಒಪ್ಪದೇ ಕ್ಯಾಬಿನೆಟ್‌ನಲ್ಲಿ ತೀರ್ಮಾನಿಸುವಾಗಿ ಸಿಎಂ ತಿಳಿಸಿದ್ದರು. ಈ ಹಿನ್ನೆಲೆ ಇವತ್ತು ಕ್ಯಾಬಿನೆಟ್ ಸಭೆಯಲ್ಲಿ ಹಾಲಿನ ದರ ಏರಿಕೆ ಪ್ರಸ್ತಾಪಿಸುವ ಸಾಧ್ಯತೆಯಿದ್ದು, 2 ಅಥವಾ 3 ರೂ. ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಕೊಡುತ್ತಾ ಎಂದು ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!