spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

“ವರಿಷ್ಠರೊಂದಿಗೆ ಸಮಾಲೋಚನೆ ನಡೆಸಿದ‌ ನಂತರ ಸಂಪುಟ ರಚನೆ”

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ನೂತನ ಸಂಪುಟ ರಚನೆಯ ಚರ್ಚೆ ಜೋರಾಗಿದ್ದು, ಜೆ.ಪಿ.‌ನಡ್ಡಾ ಸೇರಿದಂತೆ ಇತ‌ರ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ‌ ಬಳಿಕ  ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹೈಕಮಾಂಡ್ ನಿರ್ಧಾರದಂತೆ ಸಂಪುಟ ರಚನೆ ಆಗಲಿದೆ. ಸಮುದಾಯದ ದೃಷ್ಠಿಯಿಂದ, ಹಳಬರನ್ನು ಎಷ್ಟು ಜನರನ್ನು ಮುಂದುವರೆಸಬೇಕು. ಎಷ್ಟು ಜನರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕು. ಎಷ್ಟು ಹಂತದಲ್ಲಿ ಸಚಿವ ಸಂಪುಟ ರಚನೆ ಮಾಡಬೇಕು. ಡಿಸಿಎಂ ಸ್ಥಾನವನ್ನು ಎಷ್ಟು ಜನರಿಗೆ ಕೊಡಬೇಕು ಎನ್ನುವ ಕುರಿತಂತೆ ಇಂದು ಸಂಜೆ ಚರ್ಚೆಯಾಗಲಿದೆ ಎಂದಿದ್ದಾರೆ.

ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಪ್ರಮುಖರನ್ನು ಹೊಸ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಂಡು ಸಮತೋಲನ ಕಾಯ್ದುಕೊಳ್ಳುವ ಬಗ್ಗೆಯೂ ಚರ್ಚೆ ಆಗಲಿದೆ. ಪ್ರಾದೇಶಿಕತೆ, ಜಾತಿ, ಹಿರಿತನಕ್ಕೆ ಆದ್ಯತೆ ನೀಡುವ ಬಗ್ಗೆ ವರಿಷ್ಠರೇ ನಿರ್ಧರಿಸಲಿದ್ದಾರೆ. ಬುಧುವಾರ ಸಂಪುಟ ರಚನೆ ನಡೆಯೋ ಸಾಧ್ಯತೆ ಇದೆ ಎಂದು ಹೇಳಿದ್ದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss