ಹೊಸದಿಗಂತ ಕಾರವಾರ :
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.
ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗ ಪ್ರವೇಶಕ್ಕೆ ನಿರ್ಭಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಭಂಧವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 8.21 ಕಿ.ಮೀ ಸಮುದ್ರ ತೀರದ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ.
ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.