Friday, June 2, 2023

Latest Posts

ಸಚಿವ ಸಂಪುಟ ವಿಸ್ತರಣೆ ಜಟಾಪಟಿ: ಇಂದು ರಾತ್ರಿ ಒಳಗೆ ಲಿಸ್ಟ್ ಫೈನಲ್?

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರಾಜ್ಯದಲ್ಲಿ ಸರಕಾರ ಅಧಿಕಾರಕ್ಕೇರಿದ್ದು , ಇದೀಗ ನೂತನ ಸಚಿವರಿಗೆ ಖಾತೆ ಹಂಚಿಕೆ, ಸಚಿವ ಸಂಪುಟ ವಿಸ್ತರಣೆ ಜಟಾಪಟಿ ನಡೆಯುತ್ತಿದ್ದು, ಇಂದು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಚರ್ಚಿಸಿದ್ದಾರೆ.

ಇಂದು ರಾತ್ರಿಯೊಳಗೆ ಸಚಿವ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದ್ದು, ನಾಳೆ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು, ಪಕ್ಷದ ನಾಯಕರ ಜೊತೆ ಹಲವು ಹೆಸರುಗಳನ್ನು ಮುಂದಿಟ್ಟಿದ್ದಾರೆ. ಎಲ್ಲವೂ ಕೂಡ ಸಿಎಂ ಸಿದ್ಧರಾಮಯ್ಯಗೆ ಪರಮಾಧಿಕಾರ ಇದೆ. ನಾಳೆ ನೂತನ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದರು.

ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವ ಪರಮಾಧಿಕಾರಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಇದೆ. ಈ ಬಗ್ಗೆ ಸಿಎಂ ಸಿದ್ಧರಾಮಯ್ಯ ನಿರ್ಧಾರ ಮಾಡುತ್ತಾರೆ ಎಂಬುದಾಗಿ ತಿಳಿಸಿದರು.

ಮತ್ತೊಂದೆಡೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಾಸ್ಸಾಗುತ್ತಿದ್ದಾರೆ. ಸಿಎಂಗೆ ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್, ಎಂ.ಬಿ ಪಾಟೀಲ್, ಶಾಸಕ ಭೈರತಿ ಸುರೇಶ್, ಪುತ್ರ ಯತೀಂದ್ರ ಸಾಥ್ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!