ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಕೈಯಲ್ಲಿ ಯಾವುದೇ ನಿರ್ಧಾರ ಇಲ್ಲ. ಎಲ್ಲವನ್ನೂ ಹೈಕಮಾಂಡ್ ನೋಡಿಕೊಳ್ಳಲಿದೆ. ನಾಗೇಂದ್ರ ಮತ್ತೇ ಸಚಿವರಾಗ್ತಾರೆ. 10 ದಿನದಲ್ಲಿ ನಾಗೇಂದ್ರ ಅವರಿಗೆ ಸಚಿವಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಸಿಎಂ ಬದಲಾವಣೆ ಆಗುತ್ತಾರಾ ಎಂಬ ಪ್ರಶ್ನೆಗೆ, ಸದ್ಯಕ್ಕೆ ಸಿಎಂ ಸ್ಥಾನ ಖಾಲಿಯಿಲ್ಲ. ಐದು ವರ್ಷ ಸಿದ್ದರಾಮಯ್ಯ ಮುಂದುವರೆಯುತ್ತಾರೆ ಎಂದು ಪ್ರಶ್ನಿಸಿದರು.