August 10, 2026
Monday, August 10, 2026
spot_img

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪೂರ್ಣವಾಗಲಿದೆ : ಸಿಎಂ ಡಿಕೆಶಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ದೆಹಲಿಗೆ ಹೊರಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿ, ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು ಆತುರದಲ್ಲಿದ್ದೀರಿ. ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದರು.

ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು ಎಂದು ಹೇಳಿದರು

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !