ಹೊಸದಿಗಂತ ವರದಿ,ಮೈಸೂರು:
ಇನ್ನೂ 3 ತಿಂಗಳು ಕಾಲ ಸಚಿವ ಸಂಪುಟ ವಿಸ್ತರಣೆ ನಡೆಯುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮಂಗಳವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅವರು, ನಾಡ ಶಕ್ತಿ ದೇವತೆ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರರ‍್ಥನೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆ ಮುಗಿಯುವವರೆಗೂ ರಾಜ್ಯ ರ‍್ಕಾರದ ಸಚಿವ ಸಂಪುಟ ವಿಸ್ತರಣೆ ಆಗುವುದಿಲ್ಲ. ಈ ಬಗ್ಗೆ ಖುದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸ್ಪಷ್ಟನೆ ನೀಡಿದ್ದಾರೆ. ಇದನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಈ ಬಗ್ಗೆ ನನಗೆ ಯಾರು ಹೈ ಕಮಾಂಡ್ ನಾಯಕರು ಹೇಳಿಲ್ಲ.
ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಇದನ್ನು ಹೈ ಕಮಾಂಡ್ ನಾಯಕರು ನರ‍್ಧರಿಸುತ್ತಾರೆ. ಸದ್ಯಕ್ಕೆ ಪಂಚರಾಜ್ಯ ಚುನಾವಣೆ ನಡೆಯುತ್ತಿದೆ. ಹೀಗಾಗಿ ಹೈಕಮಾಂಡ್ ನಾಯಕರ ಗಮನ ಚುನಾವಣೆಯತ್ತ ಇದೆ. ಹೀಗಾಗಿ ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುವ ವಿಷಯ ಈಗ ಹೈಕಮಾಂಡ್ ಮುಂದೆ ಇಲ್ಲ ಎಂದು ತಿಳಿಸಿದರು.
ಮುಂದೆ ನಾನು ಮಂತ್ರಿಯಾಗಿರಬೇಕಾ, ಶಾಸಕನಾಗಿ ಇರಬೇಕಾ ಅಥವಾ ಪಕ್ಷದ ಕೆಲಸ ಮಾಡಬೇಕಾ? ಎಂಬುದನ್ನು ಪಕ್ಷ ತರ‍್ಮಾನ ಮಾಡುತ್ತದೆ. ಅದಕ್ಕೆ ನಾನು ಬದ್ಧ ಮುಂದಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನನ್ನು ನೇಮಕ ಮಾಡಬೇಕಾ, ಬೇಡ ಎಂಬುದನ್ನು ಪಕ್ಷ ತರ‍್ಮಾನ ಮಾಡುತ್ತದೆ ಎಂದು ಹೇಳಿದರು.