ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಕೋವಿಡ್–19 ಹಗರಣದ ತನಿಖೆಗಾಗಿ ಕಾಂಗ್ರೆಸ್ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿಯನ್ನು ಸಲ್ಲಿಸಿದೆ. ವರದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೊವಿಡ್ ಹಗರಣದ ತನಿಖೆಗೆ SIT ರಚನೆ ಮಾಡಲು ಸಂಪುಟ ಅಸ್ತು ಎಂದಿದೆ.
ಇಂದಿನ ಸಂಪುಟ ಸಭೆಯಲ್ಲಿ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಸಂಪುಟ ತೀರ್ಮಾನಿಸಿದೆ.