ಸಚಿವ ಸಂಪುಟ ಸಭೆ: SC/ST, BPL ಕಾರ್ಡ್‌ದಾರರಿಗೆ 75 ಯುನಿಟ್‌ ತನಕ ಉಚಿತ ವಿದ್ಯುತ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

SC/ST, BPL ಕಾರ್ಡ್‌ದಾರರಿಗೆ ಚ75 ಯುನಿಟ್‌ ತನಕ ಉಚಿತ ವಿದ್ಯುತ್‌ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌ ನೀಡಿದೆ.
ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಂದು ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಎಸ್​ಎಸ್​ಎಲ್​ಸಿ ಹಾಗೂ ಪಿಯುಸಿ ಪರೀಕ್ಷಾ ಮಂಡಳಿಗಳನ್ನ ವಿಲೀನಗೊಳಿಸಿ ಏಕರೂಪ ಪರೀಕ್ಷಾ ಮಂಡಳಿಯನ್ನ ಜಾರಿಗೆ ತರಲು ನಿರ್ಧರಿಸಲಾಗಿದೆ. ಅನಗತ್ಯ ಖರ್ಚು, ಹೆಚ್ಚುವರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವು ಅನಗತ್ಯ ಖರ್ಚಿಗೆ ಬ್ರೇಕ್ ಹಾಕಲು SSLC, PU ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!