ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ.
ಮಲೆಮಹದೇಶ್ವರದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಭೆ ನಡೆಸಲು ವಜ್ರಮಲೆ ವಸತಿ ಗೃಹದ ಎದುರಿನ ಆವರಣದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದೆ. ಇದರಿಂದ ಬಿಸಿಲು, ಮಳೆ ಬಂದರೂ ಸಭೆಗೆ ಯಾವುದೇ ಅಡ್ಡಿಯಾಗುವುದಿಲ್ಲ.
ಸಚಿವ ಸಂಪುಟ ಸಭೆಯಲ್ಲಿ ಮೈಸೂರು ವಿಭಾಗದ ಎಂಟು ಜಿಲ್ಲೆಗಳ ವಿವಿಧ ಯೋಜನೆಗಳ ಬಗ್ಗೆ ಚರ್ಚೆಯಾಗಲಿದ್ದು, ಅನುಮೋದನೆ ಸಾಧ್ಯತೆಯಿದೆ. ಇನ್ನೂ ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ಸಾಧ್ಯತೆ ಇದೆ.