ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮಸ್ಥರ ವಿರೋಧದ ನಡುವೆಯೂ ಗೂರುವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಪರಮಾಣು ವಿದ್ಯುತ್ ಸ್ಥಾವರಕ್ಕೆ ಅನುಮೋದನೆ ನೀಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಕೊಪ್ಪಳ, ವಿಜಯಪುರ, ರಾಯಚೂರು ಮತ್ತು ಇತರ ಸ್ಥಳಗಳ ಪ್ರಾಥಮಿಕ ಅಧ್ಯಯನವನ್ನು ಕೈಗೊಳ್ಳಲು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮಕ್ಕೆ (ಎನ್‌ಟಿಪಿಸಿ) ಸಂಪುಟವು ಅನುಮತಿ ನೀಡುವ ಸಾಧ್ಯತೆಗಳಿವೆ.
ಈ ವರ್ಷದ ಕೇಂದ್ರ ಬಜೆಟ್‌ನಲ್ಲಿ, ಭಾರತದ ದೀರ್ಘಕಾಲೀನ ಇಂಧನ ಪರಿವರ್ತನಾ ಕಾರ್ಯತಂತ್ರದ ಭಾಗವಾಗಿ ಪರಮಾಣು ಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಕೇಂದ್ರ ಸರ್ಕಾರವು 2047 ರ ವೇಳೆಗೆ 100 ಗಿಗಾವ್ಯಾಟ್ ಪರಮಾಣು ವಿದ್ಯುತ್ ಸಾಮರ್ಥ್ಯದ ಗುರಿಯನ್ನು ಹೊಂದಿದೆ. ಪಳೆಯುಳಿಕೆ ಇಂಧನಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುವ ಮೂಲಕ ದೇಶದಲ್ಲಿ ಪರಮಾಣು ಪ್ರಮುಖ ವಿದ್ಯುತ್ ಮೂಲವಾಗಬೇಕೆಂದು ಬಯಸುತ್ತಿದೆ.
ಇಂದು ನಡೆಯುವ ಸಚಿವ ಸಂಪುಟದಲ್ಲಿ ಜೂನ್ 4 ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ 11 ಮಂದಿಯನ್ನು ಬಲಿ ಪಡೆದ ಕಾಲ್ತುಳಿತದ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಅವರು ಸಲ್ಲಿಸಿದ ವರದಿಯ ಕುರಿತಂತೆಯೂ ಚರ್ಚೆ ನಡೆಯುವ ಸಾಧ್ಯತೆಗಳಿವೆ.