ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.
ಸಂಪುಟ ಸಭೆಗೂ ಮುನ್ನ ಇಂದು ಸಚಿವ ಎಚ್.ಸಿ. ಮಹದೇವಪ್ಪ ಮನೆಯಲ್ಲಿ ದಲಿತ ನಾಯಕರ ಉಪಹಾರ ಸಭೆ ನಡೆದಿದೆ. ಈ ಬಾರಿ ಸಂಪುಟದಲ್ಲಿ ಒಳ ಮೀಸಲಾತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇರುವ ಕಾರಣ ಈ ಉಪಹಾರ ಸಭೆ ಭಾರೀ ಮಹತ್ವ ಪಡೆದಿದೆ.
ಇದರ ಜೊತೆಗೆ ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ ಘೋಷಣೆ ಮಾಡುವ ಸಾಧ್ಯತೆಯೂ ಇದೆ.