ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ಬಹುತೇಕ ಫಿಕ್ಸ್ ಆಗಿದ್ದು, ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ರಾಮಲಿಂಗಾರೆಡ್ಡಿ ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂದು ಸುಳಿವು ನೀಡಿದ್ದಾರೆ
ಬೆಂಗಳೂರಲ್ಲಿ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ ಆಗಲಿದೆ. ನಮ್ಮಲ್ಲಿ 7 ರಿಂದ 8 ಹಿರಿಯ ಶಾಸಕರಿದ್ದಾರೆ ಅವರಿಗೂ ಕೂಡ ಅವಕಾಶ ಕೊಡಬೇಕಲ್ವಾ ಎಂದು ಹೇಳಿದ್ದಾರೆ.