Monday, September 22, 2025

ನವೆಂಬರ್ ನಲ್ಲಿ ಸಚಿವ ಸಂಪುಟ ಪುನರ್ ರಚನೆ, ಶೇ. 50ರಷ್ಟು ಬದಲಾವಣೆ: ಸಲೀಂ ಸ್ಪೋಟಕ ಹೇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವೆಂಬರ್ ನಲ್ಲಿ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗಲಿದೆ. ಶೇ. 50ರಷ್ಟು ಸಚಿವರ ಬದಲಾವಣೆಯ ಸಾಧ್ಯತೆ ಇದೆ ಎಂದು ದೆಹಲಿಯಲ್ಲಿ ಎಂಎಲ್ಸಿ ಸಲೀಂ ಅಹಮದ್ ಹೊಸ ಬಾಂಬ್ ಸಿಡಿಸಿದ್ದಾರೆ.

ನವೆಂಬರ್ ನಲ್ಲಿ ನಮ್ಮ ಸರ್ಕಾರ ಆಡಳಿತಕ್ಕೆ ಬಂದು ಎರಡೂವರೆ ವರ್ಷ ಆಗುತ್ತದೆ. ಹಾಗಾಗಿ ಸಂಪುಟ ಬದಲಾವಣೆ ಆಗಲಿದೆ ಸುಮಾರು ಶೇ.50 ರಷ್ಟು ಹೊಸಬರಿಗೆ ಸ್ಥಾನ ನೀಡಲಾಗುತ್ತದೆ. ಸಂಪುಟದಿಂದ ಕೈಬಿಟ್ಟಂದವರಿಗೆ ಪಕ್ಷದ ಜವಾಬ್ದಾರಿಯನ್ನು ವಹಿಸಲಾಗುತ್ತದೆ ಎಂದರು.

ಮುಂದಿನ 2028 ರಲ್ಲಿ ಕೂಡ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಹಾಗಾಗಿ ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಅಂತ ಹೇಳಿದ್ದೇವೆ. ಸಂಪುಟ ಬದಲಾವಣೆ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಸ್ಪೋಟಕ ಹೇಳಿಕೆ ನೀಡಿದರು.

ಇದನ್ನೂ ಓದಿ