ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಕಾನೂನು ಬಾಹಿರ, ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಡೀ ಸಂಪುಟ, ಪಕ್ಷ, ಸರ್ಕಾರ ಮುಖ್ಯಮಂತ್ರಿಗಳ ಪರವಾಗಿದೆ.ಯಾವುದೇ ಕಾರಣಕ್ಕೂ, ಯಾವುದೇ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯಪಾಲರ ನಿರ್ಣಯದ ವಿರುದ್ಧ ಹೋರಾಟ ನಡೆಸಲಾಗುವುದು. ಸಂಪುಟ ಸಭೆ ರಾಜ್ಯಪಾಲರ ಕ್ರಮವನ್ನು ಖಂಡಿಸಿದೆ, ಇಡೀ ಸಂಪುಟ ಸಿಎಂ ಪರವಾಗಿಧೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.