ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾತಿ ಜನಗಣತಿ ವರದಿಯನ್ನು ಮುಂದಿನ ಬಾರಿ ಕ್ಯಾಬಿನೆಟ್‌ನಲ್ಲಿ ಚರ್ಚೆಗೆ ತರಲಾಗುವುದು. ಚರ್ಚೆ ಆದಮೇಲೆ ನೋಡೋಣ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.
ನಗರದ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ ಎಂಬ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಜನಗಣತಿಯ ಬಗ್ಗೆಯೇ ಎಲ್ಲರೂ ಯೋಚಿಸುತ್ತಾರೆ. ಸಚಿವ ಸಂಪುಟದಲ್ಲಿ ಚರ್ಚೆಯಾಗಲಿ. ನಾವು ನಂತರ ನೋಡೋಣ. ರಾಜ್ಯ ಸರಕಾರದಿಂದ 160 ಕೋಟಿ ರೂ. ಖರ್ಚು ಮಾಡಲಾಗಿದೆ, ಇದಕ್ಕೂ ಲೆಕ್ಕ ಕೊಡಬೇಕಿದೆ. ನಾಳೆ ಸಿಎಜಿ ಕೂಡ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಬಹುದು. ಆದ್ದರಿಂದ, ಜನಗಣತಿಯ ಫಲಿತಾಂಶಗಳನ್ನು ಸಚಿವ ಸಂಪುಟಕ್ಕೆ ವರ್ಗಾಯಿಸಲಾಗುವುದು ಎಂದು ಹೇಳಿದ್ದಾರೆ.