ಹೊಸದಿಗಂತ ವರದಿ ಕಲಬುರಗಿ:
ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿಯ ಬಗ್ಗೆ ಚರ್ಚೆ ನಡೆಸಲು ಗುರುವಾರ ಸಂಪುಟ ಸಭೆ ಕರೆದಿದ್ದೇವೆ. ಅಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬುಧವಾರ ಇಲ್ಲಿನ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದ ಆಯೋಗ ನೀಡಿರುವುದು ಜಾತಿಗಣತಿ ಅಲ್ಲ. ಅದೊಂದು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಯಾಗಿದೆ. ಇದರಿಂದ ಯಾರಿಗೂ ಅನ್ಯಾಯ ಆಗಲ್ಲ. ಅನ್ಯಾಯ ಆಗಲಿಕ್ಕೆ ನಾವು ಬಿಡಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ, ಚನ್ನಗಿರಿ ಶಾಸಕ ಶಿವಗಂಗಾ, ಲಿಂಗಾಯತ ಶಾಸಕರು ಸಾಮೂಹಿಕ ರಾಜೀನಾಮೆ ನೀಡಬೇಕು ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅವರು ಕ್ಯಾಬಿನೆಟ್ ಮಿನಿಸ್ಟರ್ ಅಲ್ಲ. ಇದರ ಬಗ್ಗೆ ಗುರುವಾರ ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.