September 20, 2026
Sunday, September 20, 2026
spot_img

ದೊಡ್ಡಬಳ್ಳಾಪುರದಲ್ಲಿ ಕೇಬಲ್‌ ಫ್ಯಾಕ್ಟರಿ ಅಗ್ನಿ ಅವಘಡ: 15 ಗಂಟೆಯಾದ್ರೂ ಆರದ ಬೆಂಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೊಡ್ಡಬಳ್ಳಾಪುರದ ಹೊರವಲಯದ ಬಾಶೆಟ್ಟಹಳ್ಳಿಯ ಕೇಬಲ್‌ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸತತ 15 ಗಂಟೆಗಳಿಂದ ಫ್ಯಾಕ್ಟರಿ ಹೊತ್ತಿ ಉರಿಯುತ್ತಲೇ ಇದೆ. ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದರೂ ಬೆಂಕಿ ನಂದಿಸಲು ಸಾಧ್ಯವಾಗಿಲ್ಲ.

ಸುಮಾರು 15 ಅಗ್ನಿಶಾಮಕ ವಾಹನಗಳಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ. ನೂರಕ್ಕೂ ಅಧಿಕ ಸಿಬ್ಬಂದಿ ರಾತ್ರಿ ಪೂರ್ತಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಆದರೂ ಸಹ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಅಗ್ನಿ ಅವಘಡದಿಂದ ಫ್ಯಾಕ್ಟರಿಯ ಸುತ್ತಮುತ್ತ ಭಾರೀ ಪ್ರಮಾಣದ ಹೊಗೆ ಆವರಿಸಿದೆ.

ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿತ್ತು. ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಆದರೆ ಹದಿನೈದು ಗಂಟೆ ಕಳೆದರೂ ಬೆಂಕಿ ನಿಲ್ಲುವ ಲಕ್ಷಣ ಕಾಣಿಸುತ್ತಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !