ಕೇಕ್‌ ಪ್ರಿಯರೇ ತಪ್ಪದೇ ಈ ಸುದ್ದಿ ಓದಿ.. ಬ್ಲ್ಯಾಕ್‌ ಫಾರೆಸ್ಟ್‌ ಕೇಕ್‌ನಲ್ಲಿ ಕ್ಯಾನ್ಸರ್‌ಕಾರಕ ಅಂಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೇಕ್‌ ಪ್ರಿಯರೇ ಮುಂಚೆನೇ ಹೇಳ್ತಿದ್ದೇವೆ ಕೇಳಿ ಈ ಸುದ್ದಿ ಓದಿದ ನಂತರ ಇನ್ನೊಮ್ಮೆ ನೀವು ಕೇಕ್‌ ಮುಟ್ಟೋದಿಲ್ಲ, ಯಾಕೆ ಗೊತ್ತಾ? ಈ ಕೇಕ್‌ಗಳಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆಯಾಗಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ಕರ್ನಾಟಕದಾದ್ಯಂತ 235 ಕೇಕ್ ಮಾದರಿಗಳ ಪರೀಕ್ಷೆ ನಡೆಸಿದ್ದು, ಅವುಗಳಲ್ಲಿ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಕಂಡುಬಂದಿವೆ. ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ನಂತಹ ಜನಪ್ರಿಯ ಕೇಕ್ ಸೇರಿದಂತೆ 12 ಕೇಕ್ ಮಾದರಿಗಳಲ್ಲಿ ಕ್ಯಾನ್ಸರ್-ಉಂಟುಮಾಡುವ ಅಂಶಗಳು ಪತ್ತೆಯಾಗಿವೆ ಎಂದು FSSAI ಹೇಳಿದೆ.

Red Velvet Cake Recipe | How to Make Red Velvet Cake

ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ ಅವರು ಈ ಸಂಬಂಧ ಬೇಕರಿಗಳಿಗೆ ಎಚ್ಚರಿಕೆ ನೀಡಿದ್ದು, ಕೇಕ್‌ಗಳಲ್ಲಿ ಹಾನಿಕಾರಕ ರಾಸಾಯನಿಕಗಳು ಮತ್ತು ಬಣ್ಣಗಳನ್ನು ಬಳಸದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದಾರೆ.

ಕೇಕ್​​ಗೆ ಬಳಸುವ ಪದಾರ್ಥಗಳು ಕಲಬರಿಕೆಯಿಂದ ಕೂಡಿವೆ ಎಂಬ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತದ ಬೇಕರಿಗಳಿಂದ 235 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಿದಾಗ 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ ಸೆಟ್ ಯೆಲ್ಲೋ, ಪೊನುಸೆಯಾ 4R , ಕಾರ್ಮಿಯೋಸೆನ್ ಎಂಬ ಅಂಶ ಪತ್ತೆಯಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

Black Forest Cake

ಗೋಬಿ ಮಂಚೂರಿಯನ್, ಕಬಾಬ್‌ಗಳು ಮತ್ತು ಪಾನಿ ಪುರಿ ಸಾಸ್‌ಗಳಂತಹ ಖಾದ್ಯಗಳಲ್ಲಿ ಕೃತಕ ಬಣ್ಣಗಳನ್ನು ಆಹಾರ ಸುರಕ್ಷತಾ ಇಲಾಖೆ ನಿಷೇಧಿಸಿದ ನಂತರ ಈ ಎಚ್ಚರಿಕೆ ನೀಡಿದೆ. ಕೇಕ್ ತಯಾರಿಸಲು ಕೃತಕ ಬಣ್ಣವನ್ನು ಅಗತ್ಯಗಿಂತ ಹೆತ್ತು ಬಳಸಲಾಗುತ್ತಿದ್ದು, ಈ ಕೃತಕ ಬಣ್ಣಗಳಿಂದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ.

ಹೀಗಾಗಿ ರೆಡ್ ವೆಲ್ವೆಟ್ ಹಾಗೂ ಬ್ಲಾಕ್ ಫಾರೆಸ್ಟ್ ಕೇಕ್​ಗೆ ಬಣ್ಣ ಬಳಕೆಗೆ ನಿರ್ಬಂಧಿಸಲಾಗಿದೆ. ಆಹಾರ ಸುರಕ್ಷತಾ ಇಲಾಖೆಯ ಸೂಚನೆ ಪಾಲಿಸುವಂತೆ ಕೇಕ್ ತಯಾರಿಕರಿಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!