ಬಿರ್ಭೂಮ್‌ ಹಿಂಸಾಚಾರ ಪ್ರಕರಣ; ಸಿಬಿಐ ತನಿಖೆಗೆ ಆದೇಶಿಸಿದ ಕಲ್ಕತ್ತಾ ಹೈಕೋರ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಪಶ್ಚಿಮ ಬಂಗಾಲದ ಬೀರ್ಭೂಮ್‌ ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರನ್ನು ಸಜೀವವಾಗಿ ದಹಿಸಿದ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಕಲ್ಕತ್ತಾ ಹೈಕೋರ್ಟ್ ಆದೇಶಿಸಿದೆ.
ಪ್ರಸ್ತುತ ತನಿಖೆ ನಡೆಸುತ್ತಿರುವ ಎಸ್‌ ಐಟಿಯು ಪ್ರಕರಣ ಕುರಿತು ಕಲೆಹಾಕಿರುವ ದಾಖಲೆಗಳು ಹಾಗೂ ವಶಕ್ಕೆ ಪಡೆದಿರುವ ಆರೋಪಿಗಳನ್ನು ಸಿಬಿಐ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಜೊತೆಗೆ ಮುಂದಿನ ವಿಚಾರಣೆಯ ದಿನಾಂಕವಾದ ಏ.7 ರೊಳಗೆ ಪ್ರಕರಣದ ಕುರಿತಾದ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ಹೈಕೋರ್ಟ್‌ ಆದೇಶಿಸಿದೆ.
ಪ್ರಕರಣವನ್ನು ಸಿಬಿಐ ಅಥವಾ ಎನ್‌ಐಎ ತನಿಖೆಗೆ ಒಪ್ಪಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಪಿಐಎಲ್‌ ಅರ್ಜಿಗಳನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಎತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ಹಾಗೂ ನ್ಯಾಯಮೂರ್ತಿ ಆರ್ ಭಾರದ್ವಾಜ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿದೆ. ಪ್ರಕರಣದಲ್ಲಿ ಈವರೆಗೆ 11 ಮಂದಿಯನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!