ʼ777 ಚಾರ್ಲಿʼ ಮೆಚ್ಚಿಕೊಂಡ ಜಾನ್‌ ಅಬ್ರಾಹಂ; ನಟನ ಮಾತುಕೇಳಿ ಸಂಭ್ರಮಿಸಿದ ನಿರ್ದೇಶಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ರಕ್ಷಿತ್‌ ಶೆಟ್ಟಿ ಅಭಿನಯದ ʼಚಾರ್ಲಿ 777ʼ ಚಿತ್ರ ಭರ್ಜರಿ ಯಶಸ್ಸು ಸಾಧಿಸಿದೆ. ಹಿಂದಿ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿರುವ ಚಿತ್ರವನ್ನು ಪ್ರೇಕ್ಷಕರು ಅಪಾರವಾಗಿ ಮೆಚ್ಚಿಕೊಂಡಿದ್ದಾರೆ. ಇನ್ನೊಂದು ಮುಖ್ಯ ವಿಚಾರವೆಂದರೆ, ಹಿಂದಿಯಲ್ಲಿ ‘777 ಚಾರ್ಲಿ’ ಚಿತ್ರಕ್ಕೆ ದಿನದಿಂದ ದಿನಕ್ಕೆ ಚಿತ್ರಮಂದಿರಗಳ ಸಂಖ್ಯೆ ಹೆಚ್ಚುತ್ತಿದೆ. ಹಲವು ಬಾಲಿವುಡ್ ಸೆಲೆಬ್ರಿಟಿಗಳು ಕನ್ನಡದ ಈ ಚಿತ್ರವನ್ನು ಮೆಚ್ಚಿದ್ದಾರೆ. ಈಗ ನಟ ಜಾನ್ ಅಬ್ರಹಾಂ ಸರದಿ. ಚಿತ್ರವನ್ನು ಮೆಚ್ಚಿರುವ ಜಾನ್‌ ಅಬ್ರಾಹಂ ನಿರ್ದೇಶಕ ಕಿರಣ್ ರಾಜ್ ಅವರಿಗೆ ಕರೆಮಾಡಿ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
‘777 ಚಾರ್ಲಿ’ ಚಿತ್ರಕ್ಕೆ ಬಾಲಿವುಡ್ ನಟರೂ ಫಿದಾ ಆಗಿದ್ದಾರೆ. ನಾಯಿ ಮತ್ತು ಮನುಷ್ಯನ ನಡುವಿನ ಭಾವನಾತ್ಮಕ ಕಥೆಯನ್ನು ನೋಡಿ ಮೆಚ್ಚಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸಿನಿಮಾ ಬಗ್ಗೆ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಈಗ, ಜಾನ್ ಅಬ್ರಹಾಂ ಅವರ ಬೆಂಬಲವು ಚಿತ್ರತಂಡದ ಸಂಭ್ರಮವನ್ನು ದುಪ್ಪಟ್ಟುಗೊಳಿಸಿದೆ.
ಮಾಸ್ ಚಿತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಜಾನ್ ಅಬ್ರಹಾಂ ಚಿತ್ರಗಳಲ್ಲಿನ ಕ್ರಿಯಾಶೀಲತೆಯನ್ನು ಹೆಚ್ಚು ಇಷ್ಟಪಡುತ್ತಾರೆ. ಮನುಷ್ಯ- ನಾಯಿಯ ನಡುವಿ ಬಾಂಧವ್ಯದ ಕಥಾಹಂದರ ಜಾನ್‌ ಮೆಚ್ಚುಗೆಗೆ ಪಾತ್ರವಾಗಿದೆ. ‘777 ಚಾರ್ಲಿ’ ಯಶಸ್ಸಿನ ಬಗ್ಗೆ ಕಿರಣ್ ರಾಜ್ ಗೆ ಕರೆ ಮಾಡಿ ಪ್ರೀತಿಯಿಂದ ಮಾತನಾಡಿದ್ದಾರೆ. ಈ ವಿಚಾರವನ್ನು ಕಿರಣ್ ರಾಜ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಮೊದಲ ಪ್ರಯತ್ನಕ್ಕೆ ಈ ಮಟ್ಟದ ಮೆಚ್ಚುಗೆ ಸಿಗುತ್ತಿರುವುದಕ್ಕೆ ಖುಷಿಯಲ್ಲಿದ್ದಾರೆ.

777 ಚಾರ್ಲಿ’ ಬಾಕ್ಸ್ ಆಫೀಸ್‌ನಲ್ಲೂ ಉತ್ತಮ ಕಲೆಕ್ಷನ್ ಮಾಡಿದೆ. ಬಿಡುಗಡೆಯಾದ ಎಲ್ಲೆಡೆ ಹೌಸ್‌ ಫುಲ್‌ ಪ್ರದರ್ಶನ ಕಾಣುತ್ತಿದ್ದು ಸದ್ಯದಲ್ಲೇ 50 ಕೋಟಿ ಕ್ಲಬ್ ಗೆ ಸೇರ್ಪಡೆಯಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!