ಫೆಬ್ರವರಿ 16 ರಂದು ಭಾರತ್​ ಬಂದ್​ಗೆ ಕರೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳ ಒಕ್ಕೂಟವು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಲು ನಿರ್ಧರಿಸಿವೆ ಎಂದು ಭಾರತ ರಾಷ್ಟ್ರೀಯ ಕಿಸಾನ್​ ಯೂನಿಯನ್​ನ (BKU) ವಕ್ತಾರ ರಾಕೇಶ್​ ಟಿಕಾಯತ್​ ತಿಳಿಸಿದ್ದಾರೆ.

ಉತ್ತರಪ್ರದೇಶದ ನೋಯ್ಡಾದಲ್ಲಿ ಮಾತನಾಡಿದ ಟಿಕಾಯತ್​, ಭಾರತ್​ ಬಂದ್​ಗೆ ರೈತ ಸಂಘಟನೆಗಳು, ವ್ಯಾಪಾರಿಗಳು ಮತ್ತು ಸಾರಿಗೆ ಸಂಸ್ಥೆಗಳು ಬೆಂಬಲ ನೀಡಬೇಕೆಂದು ಮನವಿ ಮಾಡಿದ್ದಾರೆ.

ರೈತರ ಬಹುದಿನದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾವು ಫೆಬ್ರವರಿ 16ರಂದು ಭಾರತ್​ ಬಂದ್​ಗೆ ಕರೆ ನೀಡಿದ್ದೇವೆ. ಆ ದಿನ ರೈತರು ಸಹ ಹೊಲಗಳಿಗೆ ತೆರಳದೆ ಬಂದ್ ಆಚರಿಸಿದರೆ ದೇಶಕ್ಕೆ ದೊಡ್ಡ ಸಂದೇಶ ರವಾನೆ ಮಾಡಿದಂತಾಗುತ್ತದೆ. ವ್ಯಾಪಾರಿಗಳು ಸಹ ಆ ದಿನ ವ್ಯಾಪಾರ ಸ್ಥಗಿತಗೊಳಿಸಬೇಕು ಮತ್ತು ಗ್ರಾಹಕರು ಖರೀದಿ ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.

ರೈತರು ಬೆಳೆದಿರುವ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ, ನಿರುದ್ಯೋಗ, ಅಗ್ನಿವೀರ್ ಯೋಜನೆಗೆ ವಿರೋಧ ಮತ್ತು ನಿವೃತ್ತರಾದವರಿಗೆ ಪಿಂಚಣಿ ಸಿಗದಿರುವುದು ಸಹ ದೊಡ್ಡ ಸಮಸ್ಯೆಯಾಗಿದ್ದು ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಬಂದ್​ಗೆ ಕರೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!