ನಾಳೆ ಕಲಬುರಗಿ ಬಂದ್‌ಗೆ ಕರೆ: ಮದ್ಯ ಮಾರಾಟ ನಿಷೇಧಿಸಿ ಡಿಸಿ ಆದೇಶ

ಹೊಸದಿಗಂತ ವರದಿ,ಕಲಬುರಗಿ:

ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳಿಂದ ಡಿ.24 ರಂದು ಕಲಬುರಗಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಡಿ.23ರ ರಾತ್ರಿ 12 ಗಂಟೆಯಿಂದ ಡಿ.24 ರ ರಾತ್ರಿ 12 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ತಾಲೂಕಿನಾದ್ಯಂತ ಎಲ್ಲಾ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

ಇನ್ನು ಕಲಬುರಗಿ ಬಂದ್ ಗೆ ಸಂಘಟನೆಗಳು ಕರೆ ನೀಡಿದ ಕಾರಣ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಡಿ.24 ರಂದು ಕಲಬುರಗಿ ನಗರದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಡಿ.ಡಿ.ಪಿ‌.ಐ ಸೂರ್ಯಕಾಂತ ಮದಾನೆ ಅವರು ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!