ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನೀರು ವಿಚಾರ ಆಕ್ರೋಶ ಹೆಚ್ಚುತ್ತಿದ್ದು, ಈ ಹಿನ್ನೆಲೆ ನಾಳೆ ಮಂಡ್ಯ ಬಂದ್ ಗೆ ಕರೆ ಕೂಡ ನೀಡಲಾಗಿದೆ.
ಈ ಕುರಿತು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದು, ಪ್ರತಿಭಟನೆ ಮಾಡುವುದು ಅವರ ಹಕ್ಕು. ಆದರೆ, ಯಾವುದೇ ರೀತಿಯಲ್ಲಿ ಸಾರ್ವಜನಿಕ ಆಸ್ತಿ ನಷ್ಟ ಮಾಡುವುದಾಗಲಿ, ಜನ ಸಾಮಾನ್ಯರಿಗೆ ತೊಂದರೆ ಮಾಡುವುದಾಗಲಿ, ಕಾನೂನು ಬಾಹಿರ ಚಟುವಟಿಕೆಗಳು ಮಾಡಬಾರದು ಎಂದು ಮನವಿ ಮಾಡಿದ್ದಾರೆ.
ಪ್ರತಿಭಟನೆ ಮಾಡುವುದರ ಬಗ್ಗೆ ನಮ್ಮದು ತಕರಾರು ಏನು ಇಲ್ಲ. ನೀರು ಬಿಡಬಾರದು ರಾಜ್ಯದ ಹಿತಾಸಕ್ತಿ ರಕ್ಷಣೆ ಮಾಡಲು ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡಬಹುದು. ಆದರೆ, ಯಾವುದೇ ಹಾನಿ ಮಾಡಬಾರದು. ಒಂದು ವೇಳೆ ಆ ರೀತಿಯ ಘಟನೆಗಳು ಆದ ಸಂದರ್ಭದಲ್ಲಿ ತಡೆಯಲು ಪೊಲೀಸ್ ಸಿದ್ಧರಾಗಿದ್ದಾರೆ. ಈಗಾಗಲೇ ನಾವು ಕೆಆರ್ಎಸ್, ಮಂಡ್ಯ ಜಿಲ್ಲೆ ಸೇರಿ ಪ್ರತಿಭಟನೆ ನಡೆಯುವ ಕಡೆ ಬಂದೋಬಸ್ತ್ ಮಾಡಿಕೊಂಡಿದ್ದೇವೆ. ಕಾನೂನು ಬಾಹಿರ ಚಟುವಟಿಕೆಗಳು ಮಾಡಲ್ಲ ಎಂಬ ನಂಬಿಕೆ ಇದೆ. ಒಂದು ವೇಳೆ ಹಾಗಾದಲ್ಲಿ ಕಾನೂನು ಪ್ರಕಾರ ಎಚ್ಚರಿಕೆ ವಹಿಸುತ್ತೇವೆ ಎಂದು ಹೇಳಿದರು.
ನಾವು ಯಾವುದೇ ನಿರ್ಲಕ್ಷ್ಯ ಮಾಡಿಲ್ಲ. ಎಲ್ಲ ರೀತಿಯಲ್ಲಿಯೂ ಕ್ರಮ ತೆಗೆದುಕೊಂಡಿದ್ದೇವೆ. ಸರ್ವಪಕ್ಷ ಸಭೆಯಲ್ಲಿ ಎಲ್ಲ ವಿವರಣೆ ನೀಡಿದ್ದೇವೆ. ನೀರು ಬಿಡುವ ಮೊದಲು ಸರ್ವಪಕ್ಷ ಸಭೆ ಕರೆಯಲಾಗಿತ್ತು. ಅಮೇಲೆ ಎರಡನೇ ಸರ್ವಪಕ್ಷ ಸಭೆ ಕರೆದಿದ್ದು, ಎಲ್ಲ ಒಪ್ಪಿಕೊಂಡು ನಿಮ್ಮ ಜೊತೆಗೆ ಇರುತ್ತೇವೆ. ಏನೇ ನಿರ್ಧಾರ ತೆಗೆದುಕೊಂಡರೂ ಸರ್ಕಾರದ ಜೊತೆ ಇರುತ್ತೇವೆ ಎಂದು ಹೇಳಿದ್ದಾರೆ. ಅದನ್ನೇ ನಾವು ನಿರೀಕ್ಷೆ ಮಾಡುತ್ತೇವೆ ಎಂದು ಹೇಳಿದರು.