ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯರ ಹಾಸ್ಟೆಲ್‍ನ ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ ಪತ್ತೆಯಾಗಿದ್ದು, ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೃಷ್ಣನ್ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಈ ಪ್ರಕರಣ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಾಶ್‍ರೂಮ್‍ನಲ್ಲಿ ಮುಚ್ಚಿಟ್ಟಿದ್ದ ವಸ್ತುವನ್ನು ವಿದ್ಯಾರ್ಥಿನಿ ಗಮನಿಸಿದ್ದಾಳೆ. ಆ ವಸ್ತುವನ್ನು ನೋಡಿದಾಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳನ್ನು ನೋಡಿ ಪ್ರತಿಭಟನೆ ನಡೆಸಿದ್ದಾರೆ
ಪ್ರಕರಣಕ್ಕೆ ಸಂಬಂಧ ವಿದ್ಯಾರ್ಥಿಗಳ ಹಾಸ್ಟೆಲ್‍ನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ವಿಜಯ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಲ್ಯಾಪ್‍ಟಾಪ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.