ಈ ಬಾರಿ PSI ಪರೀಕ್ಷೆಗೆ ಕ್ಯಾಮೆರಾ ಕಣ್ಗಾವಲು: ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಕ್ಯಾಮರಾ ಕಣ್ಗಾವಲಿನಲ್ಲಿ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ತೀರ್ಮಾನಿಸಿದೆ.

ಈ ಹಿನ್ನಲೆ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಬರೆಯಲು 66,990 ಅರ್ಹರಾಗಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಪರೀಕ್ಷಾರ್ಥಿಗಳು ಅರ್ಧ ಗಂಟೆ ಮೊದಲೇ ಕೇಂದ್ರದೊಳಗೆ ಇರಬೇಕು. ಒಮ್ಮೆ ಒಳಗೆ ಹೋದರೆ ಪರೀಕ್ಷೆ ಮುಗಿದ ನಂತರವೇ ಹೊರಬರಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.

ಅಷ್ಟೇ ಅಲ್ಲ, ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು‌‌ ಎಚ್ಚರಿಸಿದ್ದಾರೆ.

ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.ಈ ಬಾರಿ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸುವ ವೇಳೆ ಅವರ ಬೆರಳಚ್ಚು ಮತ್ತು ಭಾವಚಿತ್ರವನ್ನು ತೆಗೆದುಕೊಂಡು ಅವರು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಗತ್ತಿಸಿರುವ ಚಿತ್ರದ ಜೊತೆಗೆ ಆನ್​ಲೈನ್​ನಲ್ಲಿ ಹೊಂದಾಣಿಕೆ ಮಾಡುವ ವ್ಯವಸ್ಥೆ ಮಾಡಲಾಗಿದೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!