ಹೊಸದಿಗಂತ ಡಿಜಿಟಲ್ ಡೆಸ್ಕ್:
ಯಾವುದೇ ಸಾರ್ವಜನಿಕ ಸ್ಥಳದಲ್ಲಿ ವಾಶ್‌ರೂಮ್ ಬಳಕೆ ಮಾಡುವ ಮುನ್ನ ಜಾಗ್ರತೆ ಎಂದು ಸುಮ್ಮನೆ ಹೇಳೋದಲ್ಲ! ಬೆಂಗಳೂರಿನ ಥಿಯೇಟರ್ ಒಂದರ ವಾಶ್‌ರೂಮ್‌ನಲ್ಲಿ ಕ್ಯಾಮರಾ ಪತ್ತೆಯಾಗಿದೆ. ಸಾವಿರಾರು ಯುವತಿಯರ ಖಾಸಗಿ ವಿಡಿಯೋಗಳು ಕೂಡ ದೊರೆತಿದ್ದು, ಸದ್ಯ ಕೇಸ್ ದಾಖಲಾಗಿದೆ.
ಸಂಧ್ಯಾ ಥಿಯೇಟರ್‌ನ ಬಾತ್ ರೂಮ್‌ನಲ್ಲಿ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಹಿಳಾ ಟೆಕ್ಕಿ ದೂರಿನ ಮೇರೆಗೆ ಥಿಯೇಟರ್ ಹಾಗೂ ಸಿಬ್ಬಂದಿ ರಾಜೇಶ್, ಕಮಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ಮಡಿವಾಳ ಪೊಲೀಸರಿಂದ ವಿಚಾರಣೆ ನಡೆದಿದೆ.
ಇದನ್ನೂ ಓದಿ: CYBER CRIME | ಆರು ವರ್ಷದಲ್ಲಿ 52,976 ಕೋಟಿ ರೂಪಾಯಿಗೂ ಅಧಿಕ ವಂಚನೆ, ದೇಶದಲ್ಲೇ ಕರ್ನಾಟಕಕ್ಕೆ ಎರಡನೇ ಸ್ಥಾನ!
ರವಿವಾರದಂದು ಮಹಿಳಾ ಟೆಕ್ಕಿಯೊಬ್ಬರು ಸ್ನೇಹಿತರ ಜೊತೆ ಸಿನಿಮಾ ನೋಡಲು ಸಂಧ್ಯಾ ಥಿಯೇಟರ್ಗೆ ಹೋಗಿದ್ದರು. ಇಂಟರ್ವೆಲ್ ವೇಳೆ ವಾಶ್ ರೂಂಗೆ ಹೋದಾಗ ಮಹಿಳಾ ಟೆಕ್ಕಿ ಹಾಗೂ ಸ್ನೇಹಿತೆಯರ ಖಾಸಗಿ ವಿಡಿಯೋವನ್ನು ರಾಜೇಶ್ ಎಂಬಾತ ಚಿತ್ರೀಕರಣ ಮಾಡಿದ್ದಾನೆ.
ಮಹಿಳಾ ಟೆಕ್ಕಿ ಆರೋಪಿಯನ್ನ ಹಿಡಿದು ಮಾಲೀಕರ ಬಳಿ ಕರೆದೊಯ್ದಿದ್ದಾರೆ. ಈ ವೇಳೆ ಕಮಲ್ ಎಂಬಾತ ವಿಡಿಯೋ ಮಾಡಲು ಹೇಳಿದ್ದಾಗಿ ಹೇಳಿಕೆ ನೀಡಿದ್ದಾನೆ. ಸದ್ಯ ರಾಜೇಶ್, ಕಮಲ್ ಮತ್ತು ಸಂಧ್ಯಾ ಥಿಯೇಟರ್ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು ಆತನ ಮೊಬೈಲ್‌ನಲ್ಲಿ ಹಲವು ಯುವತಿಯರ ಖಾಸಗಿ ವಿಡಿಯೋಗಳು ಪತ್ತೆಯಾಗಿದ್ದು, ಹಲವು ದಿನಗಳಿಂದ ಖಾಸಗಿ ವಿಡಿಯೋಗಳ ಚಿತ್ರೀಕರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.

