ಬೊಜ್ಜು ವಿರುದ್ಧ ಅಭಿಯಾನ | ಆನಂದ್ ಮಹೀಂದ್ರಾ ಸೇರಿ 10 ಗಣ್ಯರ ನಾಮ ನಿರ್ದೇಶನ ಮಾಡಿದ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೊಜ್ಜು ವಿರುದ್ಧದ ಹೋರಾಟವನ್ನು ಬಲಪಡಿಸಲು, ಆಹಾರದಲ್ಲಿ ಖಾದ್ಯಗಳಲ್ಲಿ ಅಡುಗೆ ಎಣ್ಣೆಯ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಮುಖ ಹತ್ತು ವ್ಯಕ್ತಿಗಳ ಹೆಸರಗಳನ್ನು ನಾಮ ನಿರ್ದೇಶನ ಮಾಡಿದ್ದಾರೆ.

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ, ಅಜಂಗಢದ ಮಾಜಿ ಬಿಜೆಪಿ ಸಂಸದ ಮತ್ತು ಭೋಜ್‌ಪುರಿ ನಟ ದಿನೇಶ್ ಲಾಲ್ ಯಾದವ್ ‘ನಿರಹುವಾ’, ಕ್ರೀಡಾಪಟು ಮನು ಭಾಕರ್, ಕ್ರೀಡಾಪಟು ಮೀರಾಬಾಯಿ ಚಾನು, ಹಿರಿಯ ಮಲೆಯಾಳಂ ಚಲನಚಿತ್ರ ನಟ ಮೋಹನ್ ಲಾಲ್, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ, ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಹಿಂದಿ ಮತ್ತು ತಮಿಳು ಚಲನಚಿತ್ರ ನಟ ಆರ್. ಮಾಧವನ್, ಖ್ಯಾತ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್ ಮತ್ತು ಇನ್ಫೋಸಿಸ್ ಸಂಸ್ಥಾಪಕಿ ಮತ್ತು ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಹೆಸರನ್ನು ಮೋದಿ ನಾಮ ನಿರ್ದೇಶನ ಮಾಡಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!