spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಎಂ ಬೊಮ್ಮಾಯಿ ಅನುದಾನ ತರಲು ಆಗುತ್ತಾ: ವಿಪಕ್ಷ ನಾಯಕ ಸಿದ್ದರಾಮಯ್ಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮೈಸೂರು:

 

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಿದ್ದ ಅನುದಾನವನ್ನು ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರಿಗೆ ತರಲು ಆಗಲಿಲ್ಲ. ಇನ್ನು ಈಗಿನ ಸಿಎಂ ಬಸವರಾಜ ಬೊಮ್ಮಾಯಿರಿಂದ ತರಲು ಆಗುತ್ತಾ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಶನಿವಾರ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲೇ ಬೆಳೆದ ಬಿ.ಎಸ್.ಯಡಿಯೂರಪ್ಪಗೆ ಕೇಂದ್ರದಿoದ ಸಾಕಷ್ಟು ಪ್ರಮಾಣದಲ್ಲಿ ರಾಜ್ಯಕ್ಕೆ ಅನುದಾನ ತರಲು ಸಾಧ್ಯವಾಗಲಿಲ್ಲ. ಇನ್ನು ಜನತಾದಳದಿಂದ ಬಿಜೆಪಿಗೆ ಹೋಗಿರುವ ಸಿಎಂ ಬಸವರಾಜ ಬೊಮ್ಮಾಯಿಗೆ ಆಗುತ್ತಾ? ಜೆಡಿಎಸ್‌ನಿಂದ ಹೋದವರ ಮಾತನ್ನು ಕೇಂದ್ರ ಬಿಜೆಪಿ ಕೇಳುತ್ತಾರಾ ಎಂದು ಪ್ರಶ್ನಿಸಿದರು.
ಸಚಿವ ಸಂಪುಟ ರಚನೆ ಆಗಬೇಕಿತ್ತು, ಇನ್ನೂ ಆಗಿಲ್ಲ. ಶುಕ್ರವಾರ ದೆಹಲಿಯಲ್ಲಿ ಈ ಬಗ್ಗೆ ಅವರ ಪಕ್ಷದ ಹೈಕಮಾಂಡ್‌ನೊAದಿಗೆ ಚರ್ಚೆ ಮಾಡಿಲ್ಲ ಎನಿಸುತ್ತೆ. ಮುಂದಿನ ಬಾರಿ ಆಗಬಹುದು. ಕೊರೋನಾ ಹಿನ್ನೆಲೆಯಲ್ಲಿ ಆದಷ್ಟು ಬೇಗ ಸಚಿವ ಸಂಪುಟ ರಚನೆಯನ್ನು ಪರಿಗಣಿಸಬೇಕು. ಸರ್ಕಾರದ ಏಕ ವ್ಯಕ್ತಿಯಿಂದ ಕೊರೋನಾ ನಿಯಂತ್ರಣ ಸಾಧ್ಯವಿಲ್ಲ. ಹಾಗಾಗಿ ಆದಷ್ಟು ಬೇಗ ಸಚಿವ ಸಂಪುಟ ಆಗಬೇಕು ಎಂದು ಹೇಳಿದರು.
ಸರ್ಕಾರ ಕೊರೊನಾ 3ನೇ ಅಲೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇಲ್ಲವಾದರೆ ರಾಜ್ಯ ಮೂರನೇ ಅಲೆಯ ಹೊಡೆತಕ್ಕೆ ಸಿಲುಕಲಿದೆ ಎಂದು ಎಚ್ಚರಿಸಿದರು.
ಸಚಿವರು ಇಲ್ಲದಿದ್ದರೂ ಅಧಿಕಾರಿಗಳ ಮೂಲಕ ನಿರ್ವಹಣೆ ಮಾಡಬೇಕು. ಸಚಿವರು ಇದ್ದರೆ ಅವರೇನು ಗಡಿಗೆ ಬೀಗ ಹಾಕಲು ಸಾಧ್ಯವಿಲ್ಲ. ಅಧಿಕಾರಿಗಳ ಮೂಲಕ ಈ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss