ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA ) ಹೊಸ ಘೋಷಣೆಯೊಂದನ್ನು ಮಾಡಿದ್ದು, ದ್ವಿತೀಯ ಪಿಯು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ ಬರೆಯಬಹುದು ಎಂದು ಹೇಳಿದೆ.
ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರೀಕ್ಷೆ–2 ಮತ್ತು ಪರೀಕ್ಷೆ–3 ಬರೆಯಲು ಅವಕಾಶ ಇರುವ ಕಾರಣ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ ಎಲ್ಲ ವಿದ್ಯಾರ್ಥಿಗಳೂ ಸಿಇಟಿಗೆ ಹಾಜರಾಗಬಹುದು ಎಂದು ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಏ.16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ನಡೆಯುಲಿದೆ. ಹೊರನಾಡು ಕನ್ನಡಿಗರಿಗೆ ಏ.15ರಂದು ಕನ್ನಡ ಪರೀಕ್ಷೆ ಇರುತ್ತದೆ. ಈ ವರ್ಷ 3.3 ಲಕ್ಷ ವಿದ್ಯಾರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದಾರೆ.