ಕೈಯಿಲ್ಲದಿದ್ರೆ ವೋಟ್‌ ಮಾಡೋಕಾಗಲ್ವಾ? ಕಾಲಿನಲ್ಲಿ ಮತದಾನ ಮಾಡಿ ಮಾದರಿಯಾದ ಯುವಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಏಳು ಹಂತಗಳ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಯುವಕನೊಬ್ಬ ತನ್ನ ಕಾಲಿನಿಂದ ಮತ ಚಲಾಯಿಸಿದ್ದಾನೆ.

ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಯುವಕನೊಬ್ಬ ಮತದಾನ ಮಾಡಲು ಆಗಮಿಸಿದ ಸ್ಫೂರ್ತಿಯ ಪ್ರಸಂಗವೊಂದು ಎಲ್ಲರ ಗಮನ ಸೆಳೆದಿದೆ.

ಅಂಕಿತ್‌ ಸೋನಿಯವರು ಗುಜರಾತ್‌ನ ನಾಡಿಯಾಡ್‌ನ ಮತಗಟ್ಟೆಯಲ್ಲಿ ಕಾಲುಗಳ ಮೂಲಕ ತಮ್ಮ ಹಕ್ಕು ಚಲಾಯಿಸಿದರು. ಬಳಿಕ ದೇಶಾದ್ಯಂತ ಚುನಾವಣೆ ನಡೆಯುತ್ತಿರುವ ಕ್ಷೇತ್ರಗಳಲ್ಲಿ ಮತದಾರರು ಹೊರಗೆ ಬಂದು ಮತ ಚಲಾಯಿಸುವಂತೆ ಮನವಿ ಮಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!