ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ಅವರು ಕೆನಡಾದಲ್ಲಿ ಜಿ7 ಶೃಂಗಸಭೆಯಲ್ಲಿ ಫಲಪ್ರದವಾಗಿ ಭಾಗವಹಿಸಿ ಬಳಿಕ, ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೂರನೇ ಮತ್ತು ಕೊನೆಯ ಭಾಗವಾಗಿ ಕ್ರೊಯೇಷಿಯಾಕ್ಕೆ ತೆರಳಿದ್ದಾರೆ.
ಕೆನಡಾ ಭೇಟಿ ಫಲಪ್ರದವಾಗಿತ್ತು. ವೈವಿಧ್ಯಮಯ ಜಾಗತಿಕ ವಿಷಯಗಳ ಕುರಿತು ಫಲಪ್ರದ ಚರ್ಚೆಗಳಿಗೆ ಸಾಕ್ಷಿಯಾದ ಯಶಸ್ವಿ ಜಿ7 ಶೃಂಗಸಭೆಯನ್ನು ಆಯೋಜಿಸಿದ್ದಕ್ಕಾಗಿ ಕೆನಡಾದ ಜನತೆ ಮತ್ತು ಸರ್ಕಾರಕ್ಕೆ ಧನ್ಯವಾದಗಳು. ಜಾಗತಿಕ ಶಾಂತಿ, ಸಮೃದ್ಧಿ ಮತ್ತು ಸುಸ್ಥಿರತೆಯನ್ನು ಮತ್ತಷ್ಟು ಹೆಚ್ಚಿಸಲು ನಾವು ಬದ್ಧರಾಗಿದ್ದೇವೆ ಎಂದು ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಕನನಾಸ್ಕಿಸ್‌ನಲ್ಲಿ, ಪ್ರಧಾನ ಮಂತ್ರಿ ಏಳು ರಾಷ್ಟ್ರಗಳ ನಾಯಕರೊಂದಿಗೆ ಪ್ರಮುಖ ಜಾಗತಿಕ ಸವಾಲುಗಳು ಮತ್ತು ಉತ್ತಮ ಭೂಮಿ, ಪರಿಸರ ಹಂಚಿಕೆಯ ಆಕಾಂಕ್ಷೆಗಳ ಕುರಿತು “ಉತ್ಪಾದಕ” ಮತ್ತು ಫಲಪ್ರದ ಮಾತುಕತೆಗಳನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಹಲವು ವಿಶ್ವ ನಾಯಕರನ್ನು ಭೇಟಿಯಾದರು. ವ್ಯಾಪಾರ ಮತ್ತು ಆರ್ಥಿಕತೆಯಂತಹ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಹೆಚ್ಚಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.