ಭಾರತದಿಂದ 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಲು ಕೆನಡಾ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಭಾರತದಿಂದ 41 ರಾಜತಾಂತ್ರಿಕರು ಮತ್ತು ಅವರ ಕುಟುಂಬದ 42 ಸದಸ್ಯರನ್ನು ವಾಪಸ್ ಕರೆಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಶುಕ್ರವಾರ ತಿಳಿಸಿದ್ದಾರೆ.

ಅಕ್ಟೋಬರ್‌ 10ರೊಳಗೆ ಭಾರತದಲ್ಲಿರುವ ಹೆಚ್ಚುವರಿ ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಾಸ್‌ ಕರೆಸಿಕೊಳ್ಳಬೇಕು ಎಂದು ಭಾರತ ಖಡಕ್‌ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಭಾರತದಲ್ಲಿನ ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳಲು ಕೆನಡಾ ನಿರ್ಧರಿಸಿದೆ.

ಭಾರತವು ಅ.20ರೊಳಗೆ ಕೆನಡಾ ರಾಜತಾಂತ್ರಿಕರ ವಿನಾಯಿತಿ ರದ್ದುಗೊಳಿಸಲಾಗುತ್ತದೆ ಎಂದು ಹೇಳಿತ್ತು. ಹೀಗಾಗಿ 41 ರಾಜತಾಂತ್ರಿಕರನ್ನು ವಾಪಸ್‌ ಕರೆಸಿಕೊಳ್ಳುತ್ತಿದ್ದೇವೆ ಎಂದು ಕೆನಡಾ ವಿದೇಶಾಂಗ ಸಚಿವೆ ಮೆಲಾನೀ ಜೋಲಿ ಹೇಳಿದ್ದಾರೆ.

ಭಾರತದಲ್ಲಿ ಕೆನಡಾದ 62 ರಾಜತಾಂತ್ರಿಕ ಅಧಿಕಾರಿಗಳಿದ್ದು, ಕೆನಡಾ ಅಕ್ಟೋಬರ್‌ 10ರೊಳಗೆ 40 ರಾಜತಾಂತ್ರಿಕ ಅಧಿಕಾರಿಗಳನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಭಾರತವು ರಾಜತಾಂತ್ರಿಕ ಅಧಿಕಾರಿಗಳ ವಿನಾಯಿತಿಯನ್ನು ತೆಗೆದುಹಾಕಲಾಗುತ್ತದೆ ಎಂದು ಹೇಳಿತ್ತು. ಇದರ ಬೆನ್ನಲ್ಲೇ 41 ರಾಜತಾಂತ್ರಿಕ ಅಧಿಕಾರಿಗಳನ್ನು ಕೆನಡಾ ವಾಪಸ್‌ ಕರೆಸಿಕೊಳ್ಳಲು ನಿರ್ಧರಿಸಿದೆ.

ಜೂನ್ 18 ರಂದು ಖಲಿಸ್ತಾನಿ ವ್ಯಕ್ತಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಏಜೆನ್ಸಿಗಳ ಕೈವಾಡ ಇರುವ ಸಾಧ್ಯತೆ ಇದೆ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ಹೇಳಿಕೆ ನೀಡಿದ್ದರು. ಇದಾದ ಬೆನ್ನಲ್ಲೇ ಭಾರತ ಮತ್ತು ಕೆನಡಾ ಮಧ್ಯೆ ರಾಜತಾಂತ್ರಿಕ ಸಂಘರ್ಷ ಏರ್ಪಟ್ಟಿತ್ತು. ಭಾರತವು ಟ್ರೂಡೋ ಆರೋಪಕ್ಕೆ ಪ್ರತಿಕ್ರಿಯಿಸಿ, ಇದೊಂದು ಆಧಾರ ರಹಿತ ಆರೋಪ ಎಂದು ಹೇಳಿತ್ತು. ಅಲ್ಲದೇ ಉಭಯ ರಾಷ್ಟ್ರಗಳು ರಾಜತಾಂತ್ರಿಕ ಅಧಿಕಾರಿಗಳನ್ನು ವಜಾ ಮಾಡುವ ಮೂಲಕ ಸ್ಪರ್ಧೆಗೆ ಇಳಿದಿದ್ದವು.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!