ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆನಡಾದ 24ನೇ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಟ್ರಂಪ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆಕಾರದಲ್ಲಾಗಲಿ, ರೂಪದಲ್ಲಾಗಲಿ ಕೆನಡಾ, ಅಮೆರಿಕದ ಭಾಗವಾಗುವುದಿಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ ಡೊನಾಲ್ಡ್ ಟ್ರಂಪ್ ಅವರ ಸುಂಕ ವಿಧಿಸುವ ಕ್ರಮ ಎದುರಿಸುವುದೇ ನಮ್ಮ ಪ್ರಮುಖ ಆದ್ಯತೆ ಎಂದು ಕಿಡಿಕಾರಿದ್ದಾರೆ.
ನಮ್ಮ ಸರ್ಕಾರ ಎರಡೂ ದೇಶದ ಹಿತಾಸಕ್ತಿಯನ್ನು ಹೆಚ್ಚಿಸಲು ವಾಷಿಂಗ್ಟನ್‌ನೊಂದಿಗೆ ಒಟ್ಟಾಗಿ ಕೆಲಸ ಮಾಡಬಹುದು ಎಂದು ಭರವಸೆ ನೀಡಿದ್ದಾರೆ. ಕೆನಡಾದ ಸಾರ್ವಭೌಮತ್ವಕ್ಕೆ ಗೌರವ ಕೊಡುವುದಾದರೇ ಟ್ರಂಪ್ ಅವರನ್ನು ಭೇಟಿಯಾಗಲು ಸಿದ್ದ ಎಂದು ಗುಡುಗಿದ್ದಾರೆ.