February 23, 2026
Monday, February 23, 2026
spot_img

ಇಂಡೋ-ಪೆಸಿಫಿಕ್ ಪ್ರವಾಸ ಹೊರಟ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ: ಫೆ. 26 ರಂದು ಭಾರತಕ್ಕೆ ಭೇಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಫೆಬ್ರವರಿ 26ರಿಂದ ಮಾರ್ಚ್ 7ರವರೆಗೆ ತಮ್ಮ ಇಂಡೋ-ಪೆಸಿಫಿಕ್ ಪ್ರವಾಸದ ಭಾಗವಾಗಿ ಭಾರತಕ್ಕೆ ಆಗಮಿಸಲಿದ್ದಾರೆ.

ಫೆಬ್ರವರಿ 26 ರಿಂದ ಮಾರ್ಚ್ 7 ರವರೆಗೆ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಅವರು ಭಾರತ, ಆಸ್ಟ್ರೇಲಿಯಾ, ಜಪಾನ್ ಮತ್ತು ಜಪಾನ್‌ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸೋಮವಾರ ಕಾರ್ನಿ ಅವರ ಕಚೇರಿಯ ಅಧಿಕೃತ ಪ್ರಕಟಣೆ ತಿಳಿಸಿದೆ.

ಈ ಸಮಯ ಮಾರ್ಕ್ ಕಾರ್ನಿ ಅವರು ಫೆಬ್ರವರಿ 26 ಭಾರತಕ್ಕೆ ಭೇಟಿ ನೀಡಲಿದ್ದು, ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣಾ ವ್ಯವಹಾರಗಳ ಮೇಲೆ ಗಮನ ಹರಿಸಲಾಗುವುದು ಎಂದು ಕೆನಡಾ ಸರ್ಕಾರದ ಪ್ರಕಟಣೆ ತಿಳಿಸಿದೆ.

ಮುಂಬೈಗೆ ಮೊದಲು ಭೇಟಿ ನೀಡಲಿದ್ದಾರೆ. ಬಳಿಕ ಅಲ್ಲಿಂದ ದೆಹಲಿಗೆ ಪ್ರಯಾಣಿಸಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಉಭಯ ನಾಯಕರು ಕೆನಡಾ-ಭಾರತ ಸಂಬಂಧವನ್ನು ಉನ್ನತೀಕರಿಸುವ ಮತ್ತು ವಿಸ್ತರಿಸುವತ್ತ ಗಮನಹರಿಸಲಿದ್ದಾರೆ.

ಈ ಸಂದರ್ಭ ವ್ಯಾಪಾರ, ಇಂಧನ, ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ(AI) ಮತ್ತು ಪ್ರಮುಖ ಖನಿಜಗಳಿಗೆ ಸಂಬಂಧಿಸಿದಂತೆ ಹಲವು ನಿರ್ಣಾಯಕ ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ.

ಕೆನಡಾ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅಧಿಕಾರ ವಹಿಸಿಕೊಂಡ ನಂತರ ಕಾರ್ನಿ ಅವರು ಭಾರತಕ್ಕೆ ಮೊದಲ ಬಾರಿ ಭೇಟಿಯಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !