ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಲ ಹಿಂದೂ ವಿರೋಧಿ ಶಕ್ತಿಗಳು ಕೆನಡಾದ ಸ್ವಾಮಿನಾರಾಯಣ ದೇವಸ್ಥಾನವನ್ನು ಧ್ವಂಸಗೊಳಿಸಿದ್ದು, ಗೋಡೆಗಳ ಮೇಲೆ ಭಾರತ ವಿರೋಧಿ ಘೋಷಣೆ ಬರೆದಿದ್ದಾರೆ. ಟೊರೊಂಟೊದ ಹಿಂದೂ ದೇವಾಲಯ ಧ್ವಂಸಗೊಳಿಸಿದ್ದು, ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ದೇವಸ್ಥಾನದ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ. ಗೋಡೆ ಮೇಲೆ ಖಲಿಸ್ತಾನ್ ಜಿಂದಾಬಾದ್ ಹಾಗೂ ಭಾರತ್ ಮುರ್ದಾಬಾದ್ ಎಂದು ಬರೆಯಲಾಗಿದೆ. ಇದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಒಟ್ಟಾವಾದಲ್ಲಿರುವ ಭಾರತೀಯ ಹೈಕಮಿಷನ್ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.