JOB| ಕೆನರಾ ಬ್ಯಾಂಕ್‌ 500 ಹುದ್ದೆಗಳ ನೇಮಕಾತಿ: ಅರ್ಜಿ ಸಲ್ಲಿಸದವರು ಕೂಡಲೇ ಅರ್ಜಿ ಹಾಕಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕೆನರಾ ಬ್ಯಾಂಕ್‌ನಲ್ಲಿ 500 ಪ್ರೊಬೆಷನರಿ ಅಧಿಕಾರಿ ಅಥವಾ ಮ್ಯಾನೇಜ್ಮೆಂಟ್‌ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ವಿಸ್ತರಿಸಲಾಗಿದೆ.

ಈ ಮುಂಚೆ ಅರ್ಜಿ ಸಲ್ಲಿಸಲು ಆಗಸ್ಟ್‌ 21,2023ರ ಅವಕಾಶ ನೀಡಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ಆಗಸ್ಟ್‌ 28,2023ರ ವರೆಗೆ ವಿಸ್ತರಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಇದೀಗ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.

ಪದವಿ ವಿದ್ಯಾರ್ಹತೆ ಜೊತೆಗೆ ಆಗಸ್ಟ್‌ 1,2023ರ ಅನ್ವಯ ಕನಿಷ್ಟ 20 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಆಗಸ್ಟ್‌ 28,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!